ಮತ್ತೊಬ್ಬ ಐಎಎಸ್ ಅಧಿಕಾರಿ ರಾಜಿನಾಮೆ

ಮತ್ತೊಬ್ಬ ಐಎಎಸ್ ಅಧಿಕಾರಿ ರಾಜಿನಾಮೆ

 

ಪ್ರಗತಿವಾಹಿನಿ ಸುದ್ದಿ, ಮಂಗಳೂರು –

ಇಂದಿನ ವ್ಯವಸ್ಥಗೆ ಬೇಸತ್ತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್ ರಾಜಿನಾಮೆ ಸಲ್ಲಿಸಿದ್ದಾರೆ.

ಸುದೀರ್ಘ ರಜೆಯ ಮೇಲೆ ತೆರಳಿದ್ದ ಸೆಂಥಿಲ್ ರಜೆಯ ಅವಧಿ ಮುಕ್ತಾಯವಾಗುವ ಮುನ್ನಾದಿನ ತಮ್ಮ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದಾರೆ. ಪ್ರಜಾಪ್ರಭುತ್ವಕ್ಕ ಮಾರಕವಾಗಿರುವ ಇಂದಿನ ವ್ಯವಸ್ಥೆಯಲ್ಲಿ ಕೆಲಸ ಮಾಡುವುದು ಕಷ್ಟ. ಹಾಗಾಗಿ ರಾಜಿನಾಮೆ ಸಲ್ಲಿಸುತ್ತಿದ್ದೇನೆ ಎಂದು ರಾಜಿನಾಮೆ ಪತ್ರದಲ್ಲಿ ಅವರು ತಿಳಿಸಿದ್ದಾರೆ.

Home add -Advt

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ನಿಯಂತ್ರಣಕ್ಕೆ ಸಾಕಷ್ಟು ಪ್ರಯತ್ನ ನಡೆಸಿದ್ದ ಸೆಂಥಿಲ್ ಗೆ ಭಾರಿ ಪ್ರಮಾಣದಲ್ಲಿ ರಾಜಕೀಯ ಒತ್ತಡ ಇತ್ತು ಎನ್ನಲಾಗಿದೆ. ಆಡಳಿತದಲ್ಲಿ ನಿರಂತರ ಹಸ್ತಕ್ಷೇಪಕ್ಕೆ ಬೇಸತ್ತಿದ್ದ ಅವರು, ಮಾನಸಿಕವಾಗಿ ತೀವ್ರ ನೊಂದು ರಾಜಿನಾಮೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button