ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯ ಸರ್ಕಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಘಟನೆಗಳು ಮುಂದುವರಿದಂತಿವೆ. ಇಂದು ಮತ್ತೊಂದು ಬಾಣಂತಿಯ ಸಾವು ಸಂಭವಿಸಿದೆ.
ಹೆರಿಗೆಯಾಗಿದ್ದ ಪೂಜಾ (25) ಎಂಬುವವರು ಮೃತಪಟ್ಟಿದ್ದಾರೆ. ಉಸಿರಾಟದ ಸಮಸ್ಯೆಯಿಂದಾಗಿ ಸಾವನ್ನಪ್ಪಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ನಿನ್ನೆಯಷ್ಟೇ ಗಂಡು ಮಗುವಿಗೆ ಪೂಜಾ ಅವರು ಜನ್ಮ ನೀಡಿದ್ದರು. ಇಂದು ಅಸುನೀಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮೃತ ಪೂಜಾ ಅವರು ಗೋಕಾಲ ತಾಲೂಕಿನ ಕುಂದರಗಿ ಗ್ರಾಮದ ಕಡಕಬಾವಿ ಮೂಲದವರು ಎಂದು ತಿಳಿದುಬಂದಿದೆ.
ಮೊನ್ನೆಯಷ್ಟೇ ಹೆಣ್ಣು ಮಗುವಿಗೆ ಜನ್ಮನೀಡಿದ್ದ ಓರ್ವ ಬಾಣಂತಿ ಸಾವನ್ನಪ್ಪಿದ್ದರು. ವೈದ್ಯರ ನಿರ್ಲಕ್ಷ್ಯದಿಂದಲೇ ಮೃತಪಟ್ಟಿರುವುದಾಗಿ ಕುಟುಂಬಸ್ಥರು ಆರೋಪಿಸಿದ್ದರು. ಈ ಮೂಲಕ ಬಿಮ್ಸ್ ಆಸ್ಪತ್ರೆಯಲ್ಲಿ ಇದೇ ವಾರದಲ್ಲಿ ಇಬ್ಬರು ಬಾಣಂತಿಯರ ಸಾವಿನ ಪ್ರಕರಣಗಳು ವರದಿಯಾಗಿವೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ