Kannada NewsKarnataka NewsPolitics

*ಭೀಮಾತೀರದಲ್ಲಿ ಮತ್ತೆ ಪೈರಿಂಗ್: ಗ್ರಾಮ ಪಂಚಾಯತಿ ಅಧ್ಯಕ್ಷ ಸಾವು*

ಪ್ರಗತಿವಾಹಿನಿ ಸುದ್ದಿ :  ಭೀಮಾತೀರದಲ್ಲಿ ಮತ್ತೆ ಗುಂಡಿನ ಮೊರೆತ ಕೇಳಿ ಬಂದಿದ್ದು ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ ದುಷ್ಕರ್ಮಿಗಳಿಂದ ಗುಂಡಿನ ದಾಳಿ ನಡೆದಿದೆ. ಈ ದಾಳಿಯಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ ಸಾವನ್ನಪ್ಪಿದ್ದಾನೆ. 

ರೌಡಿಶೀಟ‌ರ್ ಭಿಮನಗೌಡ ಬಿರಾದರ್ (45) ಮೇಲೆ ಫೈರಿಂಗ್ ನಡೆಸಲಾಗಿದೆ. ಗಾಯಗೊಂಡ ಭೀಮನಗೌಡನನ್ನು ವಿಜಯಪುರ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಆತ ಪ್ರಾಣಬಿಟ್ಟಿದ್ದಾನೆ.

ಭೀಮನ ಗೌಡಗೆ ದುಷ್ಕರ್ಮಿಗಳು ಮೂರು ಸುತ್ತು ಗುಂಡು ಹಾರಿಸಿದ್ದಾರೆ. ಭೀಮನಗೌಡ ಬಿರಾದ‌ರ್ ತಲೆ, ಎದೆಗೆ ಗುಂಡು ತಗುಲಿದ್ದು ಮಹದೇವ ಭೈರಗೊಂಡ ಪರಮ ಆಪ್ತನಾದ ಭೀಮನಗೌಡ ಬಿರಾದ‌ರ್ ಕಟಿಂಗ್ ಮಾಡಿಸಿಕೊಳ್ಳುವಾಗ ಕಣ್ಣಿಗೆ ಕಾರದಪುಡಿ ಎರಚಿ, ಕೃತ್ಯ ಎಸಗಿದ್ದಾರೆ.

ಹಳ ವೈಷಮ್ಯ ಹಿನ್ನೆಲೆ ಗುಂಡಿನ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಗಾಯಗೊಂಡ ಭೀಮನಗೌಡ ಖಾಸಗಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಭೀಮನಗೌಡ ಬಿರಾದ‌ರ್ ಸಾವನಪ್ಪಿದ್ದಾನೆ. ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಂತಕರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

Home add -Advt

Related Articles

Back to top button