Belagavi NewsBelgaum NewsKannada NewsKarnataka NewsTravel

*ಬೆಳಗಾವಿ–ಬೆಂಗಳೂರು ನಡುವೆ ಮತ್ತೊಂದು ವಿಶೇಷ ರೈಲು ಸಂಚಾರ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ನೈರುತ್ಯ ರೈಲ್ವೆಯು ಬೆಳಗಾವಿ–ಬೆಂಗಳೂರು ಹಾಗೂ ಬೆಂಗಳೂರು–ಹುಬ್ಬಳ್ಳಿ ನಡುವೆ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ನವೆಂಬರ್ 21 ಮತ್ತು 22ರಂದು ತಲಾ ಒಂದು ಟ್ರಿಪ್ ಈ ರೈಲುಗಳು ಸಂಚರಿಸಲಿವೆ.

ನವೆಂಬರ್ 21ರ ಶನಿವಾರ ರೈಲು ಸಂಖ್ಯೆ 07321 ಬೆಳಗಾವಿಯಿಂದ ರಾತ್ರಿ 8 ಗಂಟೆಗೆ ಹೊರಟು, ನವೆಂಬರ್ 22ರ ಭಾನುವಾರ ಬೆಳಿಗ್ಗೆ 8 ಗಂಟೆಗೆ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ (ಎಸ್‌ಎಂವಿಟಿ) ತಲುಪಲಿದೆ.

ಈ ರೈಲು ಧಾರವಾಡ, ಹುಬ್ಬಳ್ಳಿ, ಹಾವೇರಿ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು ಹಾಗೂ ಚಿಕ್ಕಬಾಣಾವರ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.

ಮರುಪ್ರಯಾಣದಲ್ಲಿ ನವೆಂಬರ್ 22ರಂದು ರೈಲು ಸಂಖ್ಯೆ 07322 ಬೆಂಗಳೂರಿನ ಎಸ್‌ಎಂವಿಟಿಯಿಂದ ಸಂಜೆ 7 ಗಂಟೆಗೆ ಹೊರಟು, ನವೆಂಬರ್ 23ರ ಸೋಮವಾರ ಬೆಳಗಿನ ಜಾವ 4.30ಕ್ಕೆ ಹುಬ್ಬಳ್ಳಿ ತಲುಪಲಿದೆ. ಮಾರ್ಗಮಧ್ಯೆ ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ ಹಾಗೂ ಹಾವೇರಿ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.

ಈ ವಿಶೇಷ ರೈಲಿನಲ್ಲಿ ಎಸಿ, ಸ್ಲೀಪರ್ ಹಾಗೂ ಸಾಮಾನ್ಯ ದರ್ಜೆಯ ಬೋಗಿಗಳು ಸೇರಿದಂತೆ ಒಟ್ಟು 16 ಬೋಗಿಗಳಿರಲಿವೆ. ಲಗೇಜ್ ಕಮ್ ಬ್ರೇಕ್ ವ್ಯಾನ್, ಜನರೇಟರ್ ಕಾರ್ ಮತ್ತು ದಿವ್ಯಾಂಗ ಸ್ನೇಹಿ ಬೋಗಿಗಳ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ.

ಪ್ರಯಾಣಿಕರು ಈ ವಿಶೇಷ ರೈಲು ಸೇವೆಯ ಸದುಪಯೋಗ ಪಡೆದುಕೊಳ್ಳುವಂತೆ ನೈರುತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.

Related Articles

Back to top button