Kannada NewsKarnataka News

*ಮತ್ತೊಂದು ದುರಂತ: ಹೊಳೆಯಲ್ಲಿ ಮುಳಗಿ ಇಬ್ಬರ ಸಾವು*

ಪ್ರಗತಿವಾಹಿನಿ ಸುದ್ದಿ: ಹಾಸನ, ರಾಮನಗರ ಜಿಲ್ಲೆಯಲ್ಲಿ ನಡೆದ ದುರಂತ ಮಾಸುವ ಮುನ್ನ ಉತ್ತರ ಕನ್ನಡ ಜಿಲ್ಲೆಯಲ್ಲೂ ದುರಂತ ಘಟನೆ ನಡೆದಿದೆ. ಹೊಳೆಯಲ್ಲಿ ಸ್ನಾನ ಮಾಡಲು ಹೋಗಿ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.‌

Home add -Advt

15ಕ್ಕೂ ಹೆಚ್ಚು ಜನ ಹೊಳೆಯಲ್ಲಿ ಸ್ನಾನ ಮಾಡಲು ಹೋಗಿದ್ದ ಸಂದರ್ಭ ಭಟ್ಕಳ ತಾಲೂಕಿನ ಕಡವಿನಕಟ್ಟೆ ಹೊಳೆಯಲ್ಲಿ ದುರಂತ ನಡೆದಿದೆ. ಕಂಡೆಕೋಡ್ಲು ನಿವಾಸಿಗಳಾದ ಸೂರಜ್‌ ನಾಯ್ಕ (15) ಹಾಗೂ ಪಾರ್ವತಿ ಶಂಕರ್‌ ನಾಯ್ಕ (35) ಹೊಳೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಭಟ್ಕಳ ಗ್ರಾಮೀಣ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಬಗ್ಗೆ ಪ್ರಕರಣ ದಾಖಲಾಗಿದೆ.

Related Articles

Back to top button