
ಪ್ರಗತಿವಾಹಿನಿ ಸುದ್ದಿ : ಕಿಲ್ಲರ್ ಬಿಎಂಟಿಸಿ ಗೆ ಮತ್ತೊಂದು ಬಲಿಯಾಗಿದೆ. ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಹಿಂಬದಿ ಸವಾರ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ರೇಷ್ಮೆ ಸಂಸ್ಥೆಯ ಮೆಟ್ರೋ ಸ್ಟೇಷನ್ ಬಳಿ ಘಟನೆ ನಡೆದಿದೆ.
ಬದುಕುಳಿದ ಬೈಕ್ ಸವಾರನಿಗೆ ಗಂಭೀರವಾದ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ಆತನನ್ನು ಶಿಫ್ಟ್ ಮಾಡಲಾಗಿದೆ. ಕೆಆರ್ ಮಾರ್ಕೆಟ್ ನಿಂದ ಹಂಚಿಪುರ ಕಾಲೋನಿಗೆ ಬಿಎಂಟಿಸಿ ಬಸ್ ತೆರಳುತ್ತಿತ್ತು.
ಬಿಎಂಟಿಸಿ ಬಸ್ ಡಿಕ್ಕಿಯಾಗ್ತಿದ್ದಂತೆ ಬೈಕ್ ಸವಾರನಿಗೆ ತೀವ್ರ ರಕ್ತಸ್ರಾವ ಆಗಿದೆ. ನೋಡನೋಡ್ತಿದ್ದಂತೆ ಪ್ರಾಣ ಪಕ್ಷಿ ಹಾರಿಹೋಗಿದೆ.