
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಕಲ್ಯಾಣ ಕರ್ನಾಟ ಸೇರಿದಂತೆ ಕರಾವಳಿ ಭಾಗದಲ್ಲೂ ಕಳೆದ 4-5 ದಿನಗಳಿಂದ ನಿರಂತರವಾಗಿ ಸುರಿದ ಮಳೆಗೆ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ಇದಿಗ ಇನ್ನೂ ಒಂದು ವಾರವೂ ವ್ಯಾಪಕ ಮಳೆ ಸುರಿಯುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲೂ ವ್ಯಾಪಕ ಮಳೆಯ ಅಲರ್ಟ್ ಅನ್ನು ಇಲಾಖೆ ನೀಡಿದೆ. ಕರಾವಳಿ ಕರ್ನಾಟಕ ಭಾಗದ ಬಹುತೇಕ ಜಿಲ್ಲೆಗಳಲ್ಲಿ ಸೆ.6ರವರೆಗೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಒಳನಾಡಿನ ಹಲವು ಜಿಲ್ಲೆಗಳಿಗೂ ಯಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಬಾಗಲಕೋಟೆ, ಬೆಳಗಾವಿ, ಬೀದರ್, ವಿಜಯಪುರ, ಯಾದಗಿರಿ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆಯನ್ನು ಕೊಟ್ಟಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ