Latest

ಬಿಜೆಪಿಗೆ ಸೇರ್ಪಡೆಯಾಗಲಿದ್ದಾರಾ ಐಪಿಎಸ್ ಅಧಿಕಾರಿ ರವಿ ಡಿ ಚೆನ್ನಣ್ಣನವರ್?

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಐಪಿಎಸ್ ಅಧಿಕಾರಿ ಸಿಂಗಂ ಖ್ಯಾತಿಯ ಅಣ್ಣಾಮಲೈ ಬಿಜೆಪಿಗೆ ಸೇರ್ಪಡೆಯಾಗಿರುವ ಬೆನ್ನಲ್ಲೇ ಇದೀಗ ರಾಜ್ಯದ ಮತ್ತೋರ್ವ ಐಪಿಎಸ್ ಅಧಿಕಾರಿ ಕೇಸರಿ ಪಾಳಯ ಸೇರಲಿದ್ದಾರೆ ಎಂಬ ಚರ್ಚೆ ಜೋರಾಗಿದೆ. ಐಪಿಎಸ್ ಅಧಿಕಾರಿ ರವಿ.ಡಿ.ಚನ್ನಣ್ಣನವರ್ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಭೇಟಿಯಾಗಿದ್ದು, ಈ ಚರ್ಚೆಗೆ ಪುಷ್ಠಿ ನೀಡುವಂತಿದೆ.

ರವಿ ಡಿ ಚೆನ್ನಣ್ಣನವರ್ ಮಂಗಳವಾರ ದೆಹಲಿಯಲ್ಲಿ ಬಿ.ಎಲ್.ಸಂತೋಷ್ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಈಗಾಗಲೇ ಕೊಳ್ಳೆಗಾಲ ಬಿಎಸ್ ಪಿ ಶಾಸಕ ಎನ್.ಮಹೇಶ್ ಬಿಜೆಪಿ ಸೇರ್ಪಡೆ ಖಚಿತವಾಗಿದೆ. ಬಿಜೆಪಿ ಸೇರ್ಪಡೆ ನಿಟ್ಟಿನಲ್ಲಿ ಮಹೇಶ್ ಬಿ.ಎಲ್.ಸಂತೋಷ ಭೇಟಿಯಾಗಿದ್ದರು. ಈ ವೇಳೆ ಚೆನ್ನಣ್ಣನವರ್ ಅವರ್ ಕೂಡ ಜೊತೆ ಇದ್ದರು ಎನ್ನಲಾಗಿದೆ.

Home add -Advt

ಒಂದೊಮ್ಮೆ ರವಿ ಡಿ.ಚೆನ್ನಣ್ಣನವರ್ ಬಿಜೆಪಿ ಸೇರ್ಪಡೆಯಾದರೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ. ಇತ್ತೀಚೆಗೆ ಚೆನ್ನಣ್ಣನವರ್ ಹಲವು ಮಠಾಧೀಶರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದರು. ಅದರ ಬೆನ್ನಲ್ಲೇ ಬಿಜೆಪಿ ವರಿಷ್ಠರನ್ನು ಭೇಟಿಯಾಗಿರುವುದು ಕುತೂಹಲಕ್ಕೆ ಕಾರಣವಗಿದೆ.

ನಾಳೆ ಎಸ್.ಎಸ್.ಎಲ್.ಸಿ ಫಲಿತಾಂಶ?

Related Articles

Back to top button