
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದ ಮತಾಂತರ ನಿಷೇಧ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
ವಿಧಾನಸೌಧದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಸಮ್ಮತಿ ಸೂಚಿಸಲಾಯಿತು. ಈ ಮೂಲಕ ಶೀಘ್ರದಲ್ಲಿಯೇ ಮತಾಂತರ ನಿಷೇಧ ಕಾಯ್ದೆ ರಾಜ್ಯದಲ್ಲಿ ಜಾರಿಗೆ ಬರಲಿದೆ.
ಇನ್ನು ಸ್ಥಳೀಯ ಸಂಸ್ಥೆಗಳಲ್ಲಿ ಒಬಿಸಿ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಕೋರ್ಟ್ ಮೊರೆ ಹೋಗಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ವಿಧಾನ ಪರಿಷತ್ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ಘೋಷಣೆ