ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮತಾಂತರ ನಿಷೇಧ ವಿಧೇಯಕ ಮಂಡನೆ ಮಾಡುತ್ತಿದ್ದು ಎಲ್ಲರೂ ಕೂಡ ಮಸೂದೆಗೆ ಬೆಂಬಲ ಸೂಚಿಸಿ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ರಾಜ್ಯ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಮಂಡಿಸುತ್ತಿದೆ. ಮಸೂದೆಗೆ ಸರ್ವಾನುಮತದಿಂದ ಬೆಂಬಲ ನೀಡಬೇಕು. ಈಗಾಗಲೇ ದೇಶದ ವಿವಿಧ ರಾಜ್ಯಗಳಲ್ಲಿ ಈ ಕಾಯ್ದೆ ಜಾರಿಯಲ್ಲಿದೆ. ಹೀಗಾಗಿ ವಿಶೇಷವೇನಿಲ್ಲ ರಾಜ್ಯದಲ್ಲಿಯೂ ಕಾಯ್ದೆ ಜಾರಿಯಾಗಲಿದೆ ಎಂದರು.
ಜನರ ಹಿತದೃಷ್ಟಿಯಿಂದ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುತ್ತಿದ್ದೇವೆ. ಹಾಗಾಗಿ ಯಾರೂ ಕೂಡ ವಿರೋಧ ಮಾಡಬಾರದು. ಮಸೂದೆ ಮಂಡನೆಗೆ ಸರ್ವಾನುಮತದಿಂದ ಎಲ್ಲಾ ಪಕ್ಷದವರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಒಟ್ಟಾರೆ ಮಧ್ಯಾಹ್ನದ ನಂತರ ಸದನದಲ್ಲಿ ರಾಜ್ಯ ಸರ್ಕಾರ ಮತಾಂತರ ನಿಷೇಧ ಮಸೂದೆ ಮಂಡಿಸು ಸಿದ್ಧತೆ ನಡೆಸಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಕಾಯ್ದೆ ಜಾರಿಗೆ ಅವಕಾಶ ನೀಡಲ್ಲ ಎಂದು ಪಟ್ಟು ಹಿಡಿದಿದ್ದು, ಮಸೂದೆ ಮಂಡನೆಯಾದರೆ ಕಲಾಪದಲ್ಲಿ ಗದ್ದಲ ನಡೆಯುವ ಸಾಧ್ಯತೆ ದಟ್ಟವಾಗಿದೆ.
ಮಾದರಿ ನಗರವಾಗಿ ಬೆಂಗಳೂರು ಮೇಲ್ದರ್ಜೆಗೆ; ಅತ್ಯಾಧುನಿಕ ವ್ಯವಸ್ಥೆಯಲ್ಲಿ ಏನೆಲ್ಲಾ ಇರಲಿದೆ?
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ