Belagavi NewsBelgaum NewsKannada NewsKarnataka News
*ಮಾಧಕ ದ್ರವ್ಯ ವಿರೋಧ ಅಭಿಯಾನ: ಬೈಕ್ ಜಾಥಾಗೆ ಚಾಲನೆ*

ಪ್ರಗತಿವಾಹಿನಿ ಸುದ್ದಿ: ಮಾದಕ ದ್ರವ್ಯ ವಿರೋಧಿ ಅಭಿಯಾನದ ಅಂಗವಾಗಿ ಬೆಳಗಾವಿ ಜಿಲ್ಲಾ ಪೋಲಿಸ್ ಹಾಗೂ ಚಿಕ್ಕೋಡಿ ಪೋಲಿಸ್ ಠಾಣೆ ಸಂಯುಕ್ತ ಆಶ್ರಯದಲ್ಲಿ ಬುಧವಾರ (ಜೂ.೨೬) ಬೈಕ್ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಜಿಲ್ಲಾಧಿಕಾರಿ ನಿತೀಶ್ ಪಾಟೀಲ ಅವರು ಬೈಕ್ ಜಾಥಾಗೆ ಚಾಲನೆ ನೀಡಿ, ಸ್ವತಃ ಬೈಕ್ ಸವಾರಿ ಮಾಡುವ ಮೂಲಕ ಮಾದಕ ದ್ರವ್ಯಗಳ ಬಳಕೆಯಿಂದಾಗುವ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.
ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ಜಿ.ಪಂ. ಸಿ.ಇ.ಓ. ರಾಹುಲ ಸೇರಿದಂತೆ ಪೋಲಿಸ್ ಅಧಿಕಾರಿಗಳು, ಸಿಬ್ಬಂದಿಗಳು ಜಿಲ್ಲಾಧಿಕಾರಿಗಳಿಗೆ ಸಾಥ್ ನೀಡಿದರು.



