
ಪ್ರಗತಿವಾಹಿನಿ ಸುದ್ದಿ, ರಾಯಚೂರು: ಪಕ್ಷ ವಿರೋಧಿ ಚಟುವಟಿಕೆಗಳ ಹಿನ್ನೆಲೆಯಲ್ಲಿ ಜಿಲ್ಲೆಯ ಲಿಂಗಸುಗೂರು ಪುರಸಭೆಯ ನಾಲ್ವರು ಸದಸ್ಯರ ಸದಸ್ಯತ್ವ ರದ್ದುಗೊಳಿಸಲಾಗಿದೆ.
ಫಾತೀಮಾ, ಮೌಲಾಸಾಬ್, ಎ.ಪ್ರಮೋದ್ ಕುಮಾರ್ ಹಾಗೂ ಶರಣಪ್ಪ ಅನರ್ಹಗೊಂಡ ಸದಸ್ಯರು. ಇವರೆಲ್ಲ ಕಾಂಗ್ರೆಸ್ನಿಂದ ಆಯ್ಕೆಯಾಗಿದ್ದು ಚುನಾವಣೆಯಲ್ಲಿ ಕೆಆರ್ಪಿಪಿ ಪರ ಪ್ರಚಾರ ನಡೆಸಿದ್ದರು. ಈ ಕುರಿತು ಲಿಂಗಸುಗೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿ ಕ್ರಮಕ್ಕೆ ಒತ್ತಾಯಿಸಿದ್ದರು.
ಜಿಲ್ಲಾ ದಂಡಾಧಿಕಾರಿಗಳ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ನಾಲ್ವರೂ ಸದಸ್ಯರ ವಿರುದ್ಧದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅವರ ಸದಸ್ಯತ್ವ ರದ್ದು ಮಾಡಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ