Belagavi NewsBelgaum NewsCrimeKannada NewsKarnataka NewsNational

*“ಆ್ಯಂಟಿ ಸ್ಟಾಬಿಂಗ್ ಸ್ಕ್ವಾಡ್” ವಿಶೇಷ ಕಾರ್ಯಾಚರಣೆ: ಆಯುಧ ಸಮೇತ ಆರೋಪಿ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ನಗರದಲ್ಲಿ ಇತ್ತಿಚೆಗೆ ಹೆಚ್ಚುತ್ತಿರುವ ಸ್ಟಾಬಿಂಗ್ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಹಾಗೂ ಕಾನೂನು ಸುವ್ಯವಸ್ಥೆಯ ದೃಷ್ಟಿಯಿಂದ ಮುಂಜಾಗೃತಾ ಕ್ರಮವಾಗಿ ಬೆಳಗಾವಿ ನಗರದ ಎಲ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ “ಆ್ಯಂಟಿ ಸ್ಟಾಬಿಂಗ್ ಸ್ಕ್ವಾಡ್” ತಂಡದಿಂದ ಪರಿಶೀಲನೆ ಮುಂದುವರೆಸಲಾಗಿದೆ.

ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮುಚ್ಚಂಡಿ-ಬುಡ್ಯಾನೂರ ರಸ್ತೆಯಲ್ಲಿ ಆರೋಪಿತನಾದ ಕಿರಣ ದುರ್ಗಪ್ಪ ಕಡ್ಯಾಗೋಳ (22) ಎಂಬಾಗ ಕಾನೂನು ಬಾಹಿರವಾಗಿ ಅರಣ್ಯ ಪ್ರದೇಶದ ಗಿಡಗಂಟಿಗಳಲ್ಲಿ ನಿಂತು ಕೈಯಲ್ಲಿ ಕಬ್ಬಿಣದ ಕುಡುಗೋಲ ಹಿಡಿದು ಜಳಪಳಿಸುತ್ತಿದ್ದ. 

ಈ ವೇಳೆ ಮಾರಿಹಾಳ ಠಾಣೆಯ ಪಿಎಸ್‌ಐ ಮಂಜುನಾಥ ಹುಲಕುಂದ ಪಿಎಸ್‌ಐ ಹಾಗೂ ಸಿಬ್ಬಂದಿಯವರು ಆರೋಪಿಯನ್ನು ಕುಡುಗೋಲ ಸಮೇತ ವಶಕ್ಕೆ ಪಡೆದಿದ್ದು, ಕಾನೂನು ಕ್ರಮ ಜರುಗಿಸಿ, ಪ್ರಕರಣದ ತನಿಖೆ ಮುಂದುವರೆಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button