Kannada NewsLatest
ದುರ್ಗಾ ಮಾತಾ ದೌಡ ಮೆರವಣಿಗೆಯಲ್ಲಿ ಭಾಗಿಯಾದ ಸಚಿವೆ ಶಶಿಕಲಾ ಜೊಲ್ಲೆ

ಪ್ರಗತಿವಾಹಿನಿ ಸುದ್ದಿ; ಚಿಕ್ಕೋಡಿ: ಶುಕ್ರವಾರ ಯಕ್ಸಂಬಾ ಪಟ್ಟಣದಲ್ಲಿ, ನವರಾತ್ರಿ ಹಬ್ಬದ ಪ್ರಯುಕ್ತವಾಗಿ ದುರ್ಗಾ ಮಾತಾ ದೌಡ ಮೆರವಣಿಗೆಯಲ್ಲಿ ಮುಜರಾಯಿ, ಹಜ್ ಮತ್ತು ವಕ್ಫ್ ಇಲಾಖೆಯ ಸಚಿವರಾದ ಶಶಿಕಲಾ ಜೊಲ್ಲೆ ಯವರು ಭಾಗವಹಿಸಿದರು.
ಈ ವೇಳೆ ಮಾತನಾಡಿದ ಸಚಿವೆ ಶಶಿಕಲಾ ಜೊಲ್ಲೆ, ನವರಾತ್ರಿ ಹಬ್ಬದ ಸಂದರ್ಭದಲ್ಲಿ, ಉತ್ತರ ಕರ್ನಾಟಕ ಭಾಗದಲ್ಲಿ ನಡೆಯುವ ವಿಶೇಷ ಆಚರಣೆ ಇದಾಗಿದೆ. ಶಿವ ಪ್ರತಿಷ್ಠಾನದ ಹಿಂದುಸ್ತಾನದ ಸಂಸ್ಥಾಪಕ ಸಂಭಾಜೀರಾವ ಭೀಡೆ ಗುರೂಜಿ ಅವರ ಪ್ರೇರಣೆಯಿಂದ ದೌಡ್ ಕಾರ್ಯಕ್ರಮ ಆರಂಭಗೊಂಡಿದೆ ಎಂದು ಹೇಳಿದರು.
ದುರ್ಗಾ ಮಾತೆ ನಾಡಿನೆಲ್ಲೆಡೆ ಸುಖ, ಶಾಂತಿ, ಸಮೃದ್ಧಿ ನೆಲೆಸುವಂತೆ ಮಾಡಲಿ ಎಂದು ಪ್ರಾರ್ಥಿಸಿದರು.
ಹರ್ಷ ಶುಗರ್ಸ್ ಕಬ್ಬು ನುರಿಸುವ ಹಂಗಾಮಿಗೆ ಅದ್ಧೂರಿ ಚಾಲನೆ



