Karnataka News

*ಚಿನ್ನದ ಗಣಿಯಲ್ಲಿ ಏರ್ ಬ್ಲಾಸ್ಟ್: ಓರ್ವ ಕಾರ್ಮಿಕ ಸಾವು*

ಪ್ರಗತಿವಾಹಿನಿ ಸುದ್ದಿ: ಚಿನ್ನದ ಗಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏರ್ ಬ್ಲಾಸ್ಟ್ ಆಗಿ ಓರ್ವ ಕಾರ್ನಿಕ ಸಾವನ್ನಪ್ಪಿದ್ದು, ಇನ್ನೋರ್ವ ಗಂಭೀರವಾಗಿ ಗಾಯಗೊಂದಿರುವ ಘಟನೆ ನಡೆದಿದೆ.

ರಾಯಚೂರು ಜಿಲ್ಲೆಯ ಲಿಂಗಸಗೂರಿನಲ್ಲಿರುವ ಹಟ್ಟಿ ಚಿನ್ನದ ಗಣಿಯಲ್ಲಿ ಈ ದುರಂತ ಸಂಭವಿಸಿದೆ.

ಸುಮಾರು 2800 ಅಡಿ ಆಳದಲ್ಲಿ ಗಣಿಗಾರಿಕೆ ನಡೆಸುತ್ತಿದ್ದ ವೇಳೆ ಏರ್ ಬ್ಲಾಸ್ಟ್ ಆಗಿ ದುರಂತ ಸಂಭವಿಸಿದೆ. ಹಲವು ಕಾರ್ಮಿಕರು ಗಣಿಯ ಕೆಳಭಾಗದಲ್ಲಿ ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

Home add -Advt

ಶರಣಬಸವ (40) ಮೃತ ಕಾರ್ಮಿಕ. ಗಣಿಯಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ.

Related Articles

Back to top button