Politics

*ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ಅನುರಾ ಕುಮಾರ ದಿಸ್ಸಾನಾಯಕ ಆಯ್ಕೆ*

ಪ್ರಗತಿವಾಹಿನಿ ಸುದ್ದಿ: ಶ್ರೀಲಂಕಾದ ಅಧ್ಯಕ್ಷೀಯ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಹಾಲಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರನ್ನು ಸೋಲಿಸುವ ಮೂಲಕ ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ಅನುರಾ ಕುಮಾರ ದಿಸ್ಸಾನಾಯಕ ಆಯ್ಕೆಯಾಗಿದ್ದಾರೆ.

ದೇಶವು ತನ್ನ ಇತಿಹಾಸದಲ್ಲೇ ಅತ್ಯಂತ ಕೆಟ್ಟ ಆರ್ಥಿಕ ಬಿಕ್ಕಟ್ಟಿನಿಂದ ಮತ್ತು ಅದರ ಪರಿಣಾಮವಾಗಿ ರಾಜಕೀಯ ವಿಪ್ಲವದಿಂದ ಚೇತರಿಸಿಕೊಳ್ಳಲು ಪ್ರಯತ್ನಿಸುತ್ತಿರುವುದರಿಂದ ಈ ಚುನಾವಣೆ ಶ್ರೀಲಂಕಾಕ್ಕೆ ನಿರ್ಣಾಯಕವಾಗಿತ್ತು. ಶ್ರೀಲಂಕಾದ ಮಾರ್ಕ್ಸ್ ವಾದಿ ಒಲವುಳ್ಳ ನಾಯಕ ಅನುರಾ ಕುಮಾರ ದಿಸ್ಸಾನಾಯಕೆ ಅವರು ಸಾಲದ ಸುಳಿಯಲ್ಲಿ ಸಿಲುಕಿರುವ ಶ್ರೀಲಂಕಾದ ಅಧ್ಯಕ್ಷೀಯ ಚುನಾವಣೆಯಲ್ಲಿ ಜಯಗಳಿಸಿದ್ದಾರೆ ಎಂದು ಚುನಾವಣಾ ಆಯೋಗದ ಅಂಕಿಅಂಶಗಳನ್ನು ಉಲ್ಲೇಖಿಸಿ ವರದಿಯಾಗಿದೆ.

Related Articles

Back to top button