Latest

ನಟಿ ಅನುಷ್ಕಾ ಶೆಟ್ಟಿ ಸಹೋದರನ ಹತ್ಯೆಗೆ ಸ್ಕೆಚ್? ಗೃಹ ಸಚಿವರಿಗೆ ದೂರು ನೀಡಿದ ಜಯ ಕರ್ನಾಟಕ ಸಂಘಟನೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ದಕ್ಷಿಣ ಭಾರತದ ಖ್ಯಾತ ನಟಿ ಅನುಷ್ಕಾ ಶೆಟ್ಟಿ ಸಹೋದರ ಗುಣರಂಜನ್ ಶೆಟ್ಟಿ ಹತ್ಯೆಗೆ ಸಂಚು ರೂಪಿಸಲಾಗಿದೆ. ಅವರಿಗೆ ಜೀವ ಬೆದರಿಕೆಯಿದೆ ಎಂದು ಜಯಕರ್ನಾಟಕ ಸಂಘಟನೆ ಗೃಹ ಸಚಿವರಿಗೆ ದೂರು ನೀಡಿದೆ.

ಗುಣರಂಜನ್ ಶೆಟ್ಟಿ ಹಾಗೂ ಮನ್ಮಿತ್ ಶೆಟ್ಟಿ ಇಬ್ಬರೂ ದಿ.ಮುತ್ತಪ್ಪ ರೈ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದರು. ಬಳಿಕ ಮುತ್ತಪ್ಪ ರೈ ಅವರಿಂದ ಮನ್ಮಿತ್ ರೈ ದೂರ ಉಳಿದಿದ್ದರು ಎನ್ನಲಾಗಿದೆ.

ಇದೀಗ ಮನ್ಮಿತ್ ರೈನಿಂದ ಗುಣರಂಜನ್ ಶೆಟ್ಟಿ ಹತ್ಯೆಗೆ ಸ್ಕೆಚ್ ಹಾಕಲಾಗಿದೆ. ಅವರಿಗೆ ಭದ್ರತೆ ನೀಡಬೇಕು ಎಂದು ಜಯಕರ್ನಾಟಕ ಸಂಘಟನೆ ಗೃಹ ಸಚಿವ ಅರಗ ಜ್ಞಾನೇಂದ್ರ ಅವರನ್ನು ಭೇಟಿಯಾಗಿ ಮನವಿ ಮಾಡಿದೆ.

ಆದರೆ ತನ್ನ ವಿರುದ್ಧದ ಆರೋಪ ನಿರಾಕರಿಸಿರುವ ಮನ್ಮಿತ್ ರೈ, ನಾನು ವಿದೇಶದಲ್ಲಿದ್ದೆನೆ. ನನ್ನ ಬಗ್ಗೆ ಯಾಕೆ ಆರೋಪ ಮಾಡುತ್ತಿದ್ದಾರೆ ಗೊತ್ತಿಲ್ಲ. ಎಷ್ಟು ಸತ್ಯ ಎಂಬುದನ್ನು ಪೊಲೀಸರೇ ತನಿಖೆ ನಡೆಸಲಿ. ನನ್ನ ವಿರುದ್ಧ ಯಾವುದೇ ಕ್ರಿಮಿನಲ್ ಕೇಸ್ ಗಳೂ ಇಲ್ಲ. ನನಗೂ ಇದಕ್ಕೂ ಯಾವ ಸಂಬಂಧವೂ ಇಲ್ಲ ಎಂದು ಹೇಳಿದ್ದಾರೆ.
ನೂಪುರ್ ಶರ್ಮಾ ಪ್ರತಿಕೃತಿ ಗಲ್ಲಿಗೇರಿಸಿದ್ದ ಪ್ರಕರಣ; ಮೂವರ ಬಂಧನ

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button