Film & EntertainmentKarnataka News

*ಖ್ಯಾತ ನಿರೂಪಕಿ ಅನುಶ್ರೀ ಮದುವೆ ಡೇಟ್ ಫಿಕ್ಸ್*

ಪ್ರಗತಿವಾಹಿನಿ ಸುದ್ದಿ: ಕನ್ನಡದ ಖ್ಯಾತ ನಿರೂಪಕಿ, ನಟಿ ಅನುಶ್ರೀ ಶೀಘ್ರದಲ್ಲಿಯೇ ಹಸೆಮಣೆ ಏರಲಿದ್ದಾರೆ. ಕೆಲ ದಿನಗಳಿಂದ ಅನುಶ್ರೀ ಮದುವೆಯಾಗಲಿದ್ದಾರೆ ಎಂಬ ಮಾತು ಕೇಳಿಬಂದಿತ್ತು. ಇದೀಗ ಮದುವೆ ಡೇಟ್ ಫಿಕ್ಸ್ ಆಗಿದೆ.

ಆಗಸ್ಟ್ 28ರಂದು ಅನುಶ್ರೀ ವಿವಾಹವಾಗಲಿದ್ದಾರೆ. ಸಾಫ್ಟ್ ವೇರ್ ಇಂಜಿನಿಯರ್ ಜೊತೆ ಹಸೆಮಣೆಯೇರಲಿದ್ದಾರೆ ಎಂದು ತಿಳಿದುಬಂದಿದೆ. ಕುಟುಂಬದವರು ನೋಡಿರುವ ಹುಡುಗನ ಜೊತೆ ಅನುಶ್ರೀ ಮದುವೆಯಾಗಲಿದ್ದು, ಮಂಗಳೂರು ಮೂಲದ ಬೆಂಗಳೂರಿನಲ್ಲಿಯೇ ನೆಲಸಿರುವ ಟೆಕ್ಕಿ ಜೊತೆ ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.

ಬೆಂಗಳೂರಿನಲ್ಲಿಯೇ ಅನುಶ್ರೀ ಆರತಕ್ಷತೆ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಲಿದೆ ಎಂದು ತಿಳಿದುಬಂದಿದೆ.

Home add -Advt

Related Articles

Back to top button