Kannada NewsKarnataka News

ಗ್ರಾಮ ಪಂಚಾಯತಿಗಳಲ್ಲಿ ನೇಮಕ: ಅರ್ಜಿ ಆಹ್ವಾನ

ಪ್ರಗತಿ ವಾಹಿನಿ ಸುದ್ದಿ, ಖಾನಾಪುರ:
ಖಾನಾಪೂರ ತಾಲೂಕಿನ ವ್ಯಾಪ್ತಿಯ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ (ವ್ಹಿ. ಆರ್. ಡಬ್ಲ್ಯೂ.) ಹುದ್ದೆಗಳನ್ನು ಇಲಾಖೆಯ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಮಾಸಿಕ ರೂ.9,000 ಗಳ ಗೌರವ ಧನ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಆಯಾ ಗ್ರಾಮ ಪಂಚಾಯ್ತಿಗಳ ವ್ಯಾಪ್ತಿಯ ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಷರತ್ತುಗಳು :
ಅರ್ಜಿದಾರರು ವಿಕಲಚೇತನರಿದ್ದು, ಕನಿಷ್ಟ 40% ಅಥವಾ 40% ಕ್ಕಿಂತ ಹೆಚ್ಚಿನ ವಿಕಲತೆ ಪ್ರಮಾಣ ಹೊಂದಿರತಕ್ಕದ್ದು, ಅರ್ಜಿದಾರರು ಆಯಾ ಗ್ರಾಮ ಪಂಚಾಯತಿಗಳ ವ್ಯಾಪ್ತಿಗೊಳಪಟ್ಟಿರಬೇಕು. ಎಸ್.ಎಸ್.ಎಲ್.ಸಿ. ಉತ್ತೀರ್ಣ/ಅನುತ್ತೀರ್ಣರಾಗಿದ್ದು, ಕಂಪ್ಯೂಟರ ಜ್ಞಾನ ಹೊಂದಿರಬೇಕು.

ಅದೇ ರೀತಿಯಲ್ಲಿ ಅರ್ಜಿದಾರರು ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 05-01-2023 ಕ್ಕೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 45 ವರ್ಷ ವಯೋಮಿತಿಯಲ್ಲಿರಬೇಕು.

ವಿಕಲಚೇತನ ಮಹಿಳಾ, ಪ.ಜಾತಿ ಮತ್ತು ಪ. ಪಂಗಡದ ಅಭ್ಯರ್ಥಿಗಳು ಹಾಗೂ ಇಲಾಖೆಯ ಯೋಜನೆಗಳ ಬಗ್ಗೆ ಜ್ಞಾನ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.

Home add -Advt

ಆಸಕ್ತಿಯುಳ್ಳ ಅಭ್ಯರ್ಥಿಗಳು ದಿನಾಂಕ: 2023, ಜನವರಿ 5, ಸಂಜೆ 5 ಗಂಟೆಯೊಳಗಾಗಿ ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲೂಕು ಪಂಚಾಯತ ಕಾರ್ಯಾಲಯ, ಖಾನಾಪೂರ ಇವರಿಗೆ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಖಾನಾಪೂರ ತಾಲೂಕಿನ ಎಂ.ಆರ್.ಡಬ್ಲ್ಯೂ ಇವರನ್ನು ಸಂಪರ್ಕಿಸಬಹುದು ಎಂದು ಬೆಳಗಾವಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

https://pragati.taskdun.com/himachal-pradesh-election30-cong-leadersexpelled/

Related Articles

Back to top button