Latest

ವಿರೋಧದ ನಡುವೆಯೂ ಎಪಿಎಂಸಿ ಕಾಯಿದೆ ಮಂಡನೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರೈತರ ತೀವ್ರ ವಿರೋಧ, ಪ್ರತಿಭಟನೆ ನಡುವೆಯೂ ರಾಜ್ಯ ಸರ್ಕಾರ ಇಂದು ಎಪಿಎಂಸಿ ಕಾಯಿದೆ ತಿದ್ದುಪಡಿ ಮಸೂದೆ ಮಂಡನೆ ಮಾಡಿದ್ದು,  ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಧಾನಸಭೆಯಲ್ಲಿ ಸಹಕಾರ ಸಚಿವ ಎಸ್.ಟಿ ಸೋಮಶೇಖರ್, ಎಪಿಎಂಸಿ ಕಾಯಿದೆ ತಿದ್ದುಪಡಿ ಮಸೂದೆ ಮಂಡನೆ ಮಾಡಿದ್ದಾರೆ. ರೈತರು ಕಾಯಿದೆ ವಿರೋಧಿಸಿ ಕಳೆದ ಮೂರು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ ರಾಜ್ಯ ಸರ್ಕಾರ  ಗಮನ ಕೊಡದೇ ಮಸೂದೆ ಮಂಡಿಸಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ವಿರೋಧದ ನಡುವೆಯೂ ಮಸೂದೆ ಮಂಡನೆ ಮಾಡಿರುವ ಸರ್ಕಾರದ ವಿರುದ್ಧ ಸೆ.28ರಂದು ಕರ್ನಾಟಕ ಬಂದ್ ಮಾಡಿ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದ್ದಾರೆ.

ಸರ್ಕಾರ ರೈತ ವಿರೋಧಿ ಎಂಬುದನ್ನು ಸ್ಪಷ್ಟಪಡಿಸಿದೆ. ಮಸೂದೆ ಮಂಡನೆ ಮೂಲಕ ರೈತರಿಗೆ ದ್ರೋಹ ಮಾಡಿದೆ. ಎಪಿಎಂಸಿ ಕಾಯಿದೆ ತಿದ್ದುಪಡಿ ಮಾಡುವ ಮೂಲಕ ಕಾರ್ಪೊರೇಟ್ ಕಂಪನಿಗಳು ಕೃಷಿ ಮಾರುಕಟ್ಟೆ ಪ್ರವೇಶಕ್ಕೆ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ನಾಳೆಯಿಂದ ರಾಜ್ಯದ ಮೂಲೆ ಮೂಲೆಗಳಲ್ಲೂ ರೈತರು ಸರ್ಕಾರದ ವಿರುದ್ಧ ಭುಗಿಲೇಳಲಿದ್ದಾರೆ ಎಂದು ಕಿಡಿಕಾರಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button