Belagavi NewsBelgaum NewsKannada NewsKarnataka News

ಎಪಿಎಂಸಿ- ಜೈ ಕಿಸಾನ್ ಮಾರುಕಟ್ಟೆ ವ್ಯಾಪಾರಸ್ಥರು ಪರಸ್ಪರ ಸಹಕರಿಸಬೇಕು: ಸಚಿವರಾದ ಸತೀಶ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳಕರ್ ಸಲಹೆ 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ :  ನಗರದಲ್ಲಿರುವ ಎ.ಪಿ.ಎಂ.ಸಿ ಹಾಗೂ ಜೈಕಿಸಾನ್ ಎರಡು ಮಾರ್ಕೆಟ್ ಗಳಿಗೆ ವ್ಯಾಪಾರ ವಹಿವಾಟುಗಳನ್ನು ಮಾಡಲು ಅವಕಾಶವಿದ್ದು, ವ್ಯಾಪಾರಸ್ಥರು ಪರಸ್ಪರ ಸಹಕಾರ ಮತ್ತು ಸೌಹಾರ್ದತೆಯಿಂದ ವ್ಯಾಪಾರ ವಹಿವಾಟುಗಳನ್ನು ನಡೆಸಿಕೊಂಡು ಹೋಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಸಲಹೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಸೋಮವಾರ (ಜ.01) ಏರ್ಪಡಿಸಲಾಗಿದ್ದ ಎಪಿಎಂಸಿ ಹಾಗೂ ಜೈಕಿಸಾನ್ ಮಾರುಕಟ್ಟೆಗಳ ವರ್ತಕರ ಸಭೆಯಲ್ಲಿ ಅವರು ಮಾತನಾಡಿದರು.

ಎಪಿಎಂಸಿ ಮಾರುಕಟ್ಟೆಯನ್ನು ಕೋಟ್ಯಂತರ ರೂಪಾಯಿ ಖರ್ಚು ಮಾಡಿ ನಿರ್ಮಿಸಲಾಗಿದೆ. ಆದರೆ ಹೊಸದಾಗಿ ಜೈಕಿಸಾನ್ ಮಾರುಕಟ್ಟೆ ಆರಂಭಿಸಿರುವುದರಿಂದ ಎಪಿಎಂಸಿ ಮಾರುಕಟ್ಟೆ ನಷ್ಟ ಅನುಭವಿಸುತ್ತಿದೆ. ಆದ್ದರಿಂದ ಇದಕ್ಕೆ ಜೈಕಿಸಾನ ಮಾರುಕಟ್ಟೆ ಸಹಕಾರ ಅವಶ್ಯಕವಾಗಿದೆ ಎಂದು ಹೇಳಿದರು.

ಸಮಯ ನಿಗದಿ ಮಾಡಿದರೆ ಎರಡು ಮಾರುಕಟ್ಟೆ ವ್ಯಾಪಾರ ವಹಿವಾಟು ಕುಂಠಿತವಾಗುವುದು. ಆದ್ದರಿಂದ ಎರಡು ಮಾರುಕಟ್ಟೆಯವರು ಹೊಂದಾಣಿಕೆ ಮಾಡಿಕೊಂಡು ಹೋಗಬೇಕು. ಮಂದಿನ ದಿನಗಳಲ್ಲಿ ಸಮಸ್ಯೆ ಹೆಚ್ಚಾದರೆ ಇನ್ನೊಂದು ಬಾರಿ ಸಭೆ ನಡೆಸಿ ಅಗತ್ಯ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಜಿಲ್ಲೆಯಲ್ಲಿ ವ್ಯಾಪಾರ ವಹಿವಾಟ ಕುಂಠಿತ; ರೈತರು ಮಾರುಕಟ್ಟೆಗೆ ಬಾರದೇ ಇರುವುದು; ತೂಕದಲ್ಲಿ ವ್ಯತ್ಯಾಸ; ವಾಹನ ಚಾಲಕರ ಕಮಿಷನ್ ಸೇರಿದಂತೆ ವಿವಿಧ ಸಮಸ್ಯೆಗಳು ತಮ್ಮ ಗಮನಕ್ಕೆ ಬಂಸಿರುತ್ತದೆ. ಅಧಿಕಾರಿಗಳು ಇವುಗಳುನ್ನು ಶೀಘ್ರವಾಗಿ ಪರಿಹರಿಸಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದೇ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮಿ ಹೆಬ್ಬಾಳಕರ್ ಅವರು ಮಾತನಾಡಿ, ನಗರದಲ್ಲಿ ಎರಡು ಮಾರುಕಟ್ಟೆಗಳ ನಡುವರ ಏನೇ ಸಮಸ್ಯೆಗಳಿದ್ದರೂ ಪರಸ್ಪರ ಸಹಕರಿಸುವ ಮೂಲಕ ಎಲ್ಲರೂ ಕೂಡಿಕೊಂಡು ಹೊಸ ವರ್ಷದ ದಿನ ಉತ್ತಮ ಹೆಜ್ಜೆ  ಇಡುವುದರ ಜತೆಗೆ ಉತ್ತಮ ರೀತಿಯಲ್ಲಿ ವ್ಯಾಪಾರ-ವಹಿವಾಟು ನಡೆಸಿಕೊಂಡು ಹೋಗಬೇಕು ಎಂದು ಹೇಳಿದರು.

ಬೆಳಗಾವಿ ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಆಸೀಫ್ (ರಾಜು) ಸೇಠ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಜಿಲ್ಲಾಧಿಕಾರಿ ನೀತೇಶ್ ಪಾಟೀಲ, ಹಾಗೂ ಎ.ಪಿ.ಎಂ.ಸಿ ಹಾಗೂ ಜೈಕಿಸಾನ್ ಎರಡು ಮಾರ್ಕೆಟ್ ವ್ಯಾಪಾರಸ್ಥರು, ಸದಸ್ಯರು ಹಾಗೂ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button