*ಬೆಳಗಾವಿಯಲ್ಲಿ ಜೂಜಾಟದ ಅಡ್ಡೆ ಮೇಲೆ ಎಪಿಎಂಸಿ ಪೊಲೀಸರ ದಾಳಿ*; *7 ಜನ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಗರದ ಸಾರ್ವಜನಿಕ ಸ್ಥಳದಲ್ಲಿ ನಡೆಯುತ್ತಿದ್ದ ಜೂಜಾಟದ ಅಡ್ಡೆ ಮೇಲೆ ಎಪಿಎಂಸಿ ಪೊಲೀಸ್ ಠಾಣೆ ಪೊಲೀಸರು ದಾಳಿ ನಡೆಸಿ, ಏಳು ಜನರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ದಾಳಿಯ ವೇಳೆ ₹14,390 ನಗದು ಸೇರಿದಂತೆ ಜೂಜಾಟಕ್ಕೆ ಬಳಸುತ್ತಿದ್ದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ನ.13ರಂದು ಮೇಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಎಪಿಎಂಸಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಯು.ಎಸ್. ಅವಟಿ ಅವರ ನೇತೃತ್ವದಲ್ಲಿ ಪಿಎಸ್ಐ ವಿಠಲ ಹಾವನ್ನವರ ಹಾಗೂ ಪೊಲೀಸ್ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.
ಬೆಳಗಾವಿ ನಗರದ ಕರ್ನಾಟಕ ಗ್ರಾಮೀಣ ಬ್ಯಾಂಕ್ ಸಮೀಪದ ಸಾರ್ವಜನಿಕ ಸ್ಥಳದಲ್ಲಿ ಹಣವನ್ನು ಪಣಕ್ಕಿಟ್ಟು ಜೂಜಾಟ ಆಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದಾರೆ.
ಈ ವೇಳೆ ಸಮೀರ ಬಾಷಾ ಮುಲ್ಲಾ (34), ಮನೋಜ್ ಪ್ರಕಾಶ್ ಕಾಲಗೆ (41), ಇಲಿಯಾಸ್ ಪಠಾಣ್ (35), ಶಾನುನಾಸಾಬಿ (37), ಶುಭಂ ವೆಂಕಟೇಶ ರಡ್ಡಿ (25), ಜ್ಯೋತಿಬಾ ಗಜಾನನ ಪಾಲಕರ (37) ಹಾಗೂ ಕಮಲೇಶ ಕೈಲಾಶ್ ಪ್ರಸಾದ್ (45) ಎಂಬ ಏಳು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ.
ದಾಳಿಯಲ್ಲಿ ₹14,390 ನಗದು ಹಾಗೂ ಜೂಜಾಟಕ್ಕೆ ಬಳಸುತ್ತಿದ್ದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಈ ಸಂಬಂಧ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 178/2026, ಕರ್ನಾಟಕ ಪೊಲೀಸ್ ಕಾಯ್ದೆಯ ಕಲಂ 87ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.
ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಕಾರ್ಯವನ್ನು ಬೆಳಗಾವಿ ನಗರ ಪೊಲೀಸ್ ಆಯುಕ್ತರು ಮತ್ತು ಡಿಸಿಪಿ ಅವರು ಶ್ಲಾಘಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ


