Belagavi NewsBelgaum NewsCrimeKannada NewsKarnataka NewsNational

*ಮಟಕಾ ಅಡ್ಡೆ ಮೇಲೆ ಪೊಲೀಸರ ದಾಳಿ, ಮೂವರು ವಶಕ್ಕೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ನಗರದ ಮಾರ್ಕಂಡೇಯ ನಗರದಲ್ಲಿ ಅಕ್ರಮವಾಗಿ ಮಟಕಾ ಆಟ ನಡೆಸುತ್ತಿದ್ದ ಆರೋಪದ ಮೇಲೆ ಎಪಿಎಂಸಿ ಠಾಣೆ ಪೊಲೀಸರು ದಾಳಿ ನಡೆಸಿ ಮೂವರನ್ನು ವಶಕ್ಕೆ ಪಡೆದಿದ್ದಾರೆ.

ಎಪಿಎಂಸಿ ಠಾಣೆ ಪಿಎಸ್‌ಐ ಎಸ್.ಕೆ. ಹೊಳೆನ್ನವರ ಅವರಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ, ಮೇಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಸಿಬ್ಬಂದಿಯೊಂದಿಗೆ ಮಾರ್ಕಂಡೇಯ ನಗರದಲ್ಲಿನ ಸಾರ್ವಜನಿಕ ಸ್ಥಳದಲ್ಲಿ ಮಟಕಾ ಅಡ್ಡೆ ಮೇಲೆ ದಾಳಿ ನಡೆಸಲಾಯಿತು.

ಈ ವೇಳೆ ಮನೋಜ ಪ್ರಕಾಶ ಕಾಳಗೆ (29), ಭೀಮಪ್ಪ ಲಕ್ಕಪ್ಪ ಒಂಟಿ (32) ಹಾಗೂ ಸಾಯಿಲ ಭಾಷಾ ಪಠಾಣ (48) ಎಂಬುವರನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳು ತಮ್ಮ ಸ್ವಂತ ಲಾಭಕ್ಕಾಗಿ ಅಂಕಿ-ಸಂಖ್ಯೆಗಳ ಮೇಲೆ ಹಣ ಹಚ್ಚಿಸಿಕೊಂಡು ಅಕ್ರಮವಾಗಿ ಮಟಕಾ ಆಟ ನಡೆಸುತ್ತಿದ್ದರು ಎನ್ನಲಾಗಿದೆ.

ದಾಳಿಯಲ್ಲಿ ₹2,252 ನಗದು ಹಾಗೂ ಮಟಕಾ ಚೀಟಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಿಚಾರಣೆ ವೇಳೆ ಮಟಕಾ ಆಟದಿಂದ ಸಂಗ್ರಹಿಸಿದ ಹಣವನ್ನು ಕಿರಣ ಭಜಂತ್ರಿ ಎಂಬಾತನಿಗೆ ನೀಡುವುದಾಗಿ ಆರೋಪಿಗಳು ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಂಖ್ಯೆ 153/2026, ಕಲಂ 78(3) ಕೆಪಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ. ಪ್ರಕರಣದಲ್ಲಿ ಇನ್ನೊಬ್ಬ ಆರೋಪಿಯ ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ದಾಳಿ ನಡೆಸಿದ ಪಿಎಸ್‌ಐ ಎಸ್.ಕೆ. ಹೊಳೆನ್ನವರ ಹಾಗೂ ಸಿಬ್ಬಂದಿಯವರ ಕಾರ್ಯವನ್ನು ಬೆಳಗಾವಿ ನಗರ ಪೊಲೀಸ್ ಆಯುಕ್ತರು ಮತ್ತು ಡಿಸಿಪಿ ಅವರು ಶ್ಲಾಘಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button