ಪ್ರಗತಿವಾಹಿನಿ ಸುದ್ದಿ: ಶಾಲಾ ಮಕ್ಕಳಲ್ಲಿ ಮಾನಸಿಕ ಹಾಗೂ ದೈಹಿಕ ಕ್ಷಮತೆ ಹೆಚ್ಚಿಸುವ ಉದ್ದೇಶದೊಂದಿಗೆ ಇದೇ ಮೊದಲ ಬಾರಿಗೆ ಅಪೋಲೋ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆ ಪಠ್ಯ ಕ್ರಮದಲ್ಲಿ ಸ್ಕಾಯ್ ಸಮರ ಕಲೆಯನ್ನು ಪರಿಚಯಿಸಿದೆ.
ಜುಲೈ 25ರ, ಗುರುವಾರದಂದು ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಕಾಶ್ಮೀರ ಮೂಲದ ಈ ಸಮರ ಕಲೆಗೆ ಚಾಲನೆ ನೀಡುವ ಮೂಲಕ ಶಾಲೆಯು ಸಾಂಸ್ಕೃತಿಕ ಪಾರಂಪರೆಯ ರಕ್ಷಣೆಯಲ್ಲಿ ತನ್ನ ಬದ್ಧತೆ ಪ್ರದರ್ಶಿಸಿದೆ. ಈ ಕಾರ್ಯಕ್ರಮದಲ್ಲಿ ಭಾರತೀಯ ಸ್ಕಾಯ್ ಫೆಡರೇಶನ್ ಜಂಟಿ ಕಾರ್ಯದರ್ಶಿ ಮೊಹಮದ್ ಅಲಿ, ಅಪೋಲೋ ನ್ಯಾಶನಲ್ ಪಬ್ಲಿಕ್ ಶಾಲೆಯ ಉಪಾಧ್ಯಕ್ಷರಾದ ಐಶ್ವರ್ಯ ಡಿಕೆಎಸ್ ಹೆಗಡೆ, ಅಂತಾರಾಷ್ಟ್ರೀಯ ಸ್ವರ್ಣ ಪದಕ ವಿಜೇತೆ ಸಾನಿಯಾ ಸುಭಾಷ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಸ್ಕಾಯ್ ಪಟುಗಳಾದ ಸಾನಿಯಾ ಸುಭಾಷ್ ಹಾಗೂ ದಿವ್ಯಾ ಅವರು ಈ ಕಲೆಯ ಕೌಶಲ್ಯಗಳನ್ನು ಪ್ರದರ್ಶಿಸಿ ಪ್ರೇಕ್ಷಕರನ್ನು ರಂಜಿಸಿದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶಾಲೆಯ ಪ್ರಾಂಶುಪಾಲರಾದ ಡಾ.ವೇದವತಿ ಬಿ.ಎ ಅವರು, “ಮಕ್ಕಳ ಮಾನಸಿಕ ಹಾಗೂ ದೈಹಿಕ ಆರೋಗ್ಯಕ್ಕೆ ನೆರವಾಗುವ ಈ ಸಮರ ಕಲೆಯನ್ನು ಪಠ್ಯದ ಭಾಗವಾಗಿ ಪರಿಚಯಿಸಲಾಗಿದೆ. ಸ್ಕಾಯ್ ಸಮರ ಕಲೆಯ ಭವ್ಯ ಸಾಂಸ್ಕೃತಿಕ ಪರಂಪರೆಯನ್ನು ಮಕ್ಕಳಿಗೆ ಪರಿಚಯಿಸುವ ಮೂಲಕ ಅವರಲ್ಲಿ ಹೆಮ್ಮೆ, ಶಿಸ್ತು ಹಾಗೂ ಸ್ವಯಂ ಜಾಗೃತಿಯನ್ನು ಮೂಡಿಸುವುದು ಇದರ ಮೂಲ ಉದ್ದೇಶ. ಈ ಪುರಾತನ ಸಮರ ಕಲೆಗೆ ಪ್ರೋತ್ಸಾಹ ನೀಡುವ ಮೂಲಕ ನಮ್ಮ ಶಾಲೆಯ ಮತ್ತು ಮಕ್ಕಳ ಬೆಳವಣಿಗೆ ಸಹಕಾರಿಯಾಗುವ ನಿರೀಕ್ಷೆ ಹೊಂದಲಾಗಿದೆ” ಎಂದು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ