
ಪ್ರಗತಿವಾಹಿನಿ ಸುದ್ದಿ: ಬೆಂಗಳೂರು ದಕ್ಷಿಣ ವಿಭಾಗದ ಉಪ ವಿಭಾಗಾಧಿಕಾರಿಗಳಾದ ಅಪೂರ್ವ ಬಿದರಿ ವಿರುದ್ಧ FIR ದಾಖಲಿಸುವಂತೆ ಬೆಂಗಳೂರು ಪ್ರಾದೇಶಿಕ ಆಯುಕ್ತರಾದ ಆಮ್ಲಾನ್ ಆದಿತ್ಯ ಬಿಶ್ವಾಸ್ ಅವರು ಬೆಂಗಳೂರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕೆ ಎ ಎಸ್ ಅಧಿಕಾರಿ ಅಪೂರ್ವ ಬಿದರಿ 53 ಅರೆ ನ್ಯಾಯಿಕ ಪ್ರಕರಣಗಳನ್ನು ನಿರ್ಧರಿಸುವಲ್ಲಿ ಲೋಪವೆಸಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ಭೂಕಂದಾಯ ಅಧಿನಿಯಮ 1964 ರ ಸೆಕ್ಷನ್ 35 ರಡಿ ಹಾಗೂ ಭಾರತೀಯ ನ್ಯಾಯ ಸಂಹಿತೆ 2023 ರ ಸೆಕ್ಷನ್ 257 ರ ಅಡಿಯಲ್ಲಿ ಎಫ್ ಐಆರ್ ದಾಖಲಿ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.