*ಕ್ಷೇತ್ರ ಶಿಕ್ಷಣಾಧಿಕಾರಿಗೆ ಪ್ರಾಥಮಿಕ ಶಾಲಾ ಶಿಕ್ಷಕರಿಂದ ಮನವಿ*
ಪ್ರಗತಿವಾಹಿನಿ ಸುದ್ದಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೆಳಗಾವಿ ನಗರ ಘಟಕದ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿ ಕಾರ್ಯಾಲಯಕ್ಕೆ ಮನವಿ ಸಲ್ಲಿಸಲಾಯಿತು.
ಇಂದು ಬೆಳಗಾವಿಯ ಸದಾಶಿವ ನಗರದಲ್ಲಿ ಇರುವ ಕ್ಷೇತ್ರ ಶಿಕ್ಷಣಾಧಿಕಾರಿ ಅವರಿಗೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟಿಸುವ ಮೂಲಕ ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೆಳಗಾವಿ ನಗರದ ಘಟಕದ ಅಧ್ಯಕ್ಷ ಬಾಬು ಸೊಗಲನ್ನವರ, ಅರ್ಹ ಪ್ರಾಥಮಿಕ ಶಾಲಾ ಶಿಕ್ಷಕರಿಗೆ 2016ರ ಪೂರ್ವದಂತೆ ಅರ್ಹತೆಯ ಆಧಾರದ ಮೇಲೆ ಪ್ರೌಢ ಶಾಲೆಗೆ ಬಡ್ತಿ ನೀಡಬೇಕು, ಪ್ರಾಥಮಿಕ ಶಾಲಾ ಶಿಕ್ಷಕರಿಗೆ 2016ರ ಪೂರ್ವದಂತೆ ಮುಖ್ಯಗುರುಗಳ ಹಾಗೂ ಹಿರಿಯ ಮುಖ್ಯ ಗುರುಗಳ ಹುದ್ದೆಗೆ ಸೇವಾ ಜೇಷ್ಠತೆಯ ಆಧಾರದ ಮೇಲೆ ಬಡ್ತಿ ನೀಡಬೇಕು ಹಾಗೂ ಇತರೆ ವಿಷಯಗಳ ಕುರಿತು ಸರಕಾರ ಗಮನ ಹರಿಸಬೇಕು ಎಂದು ಮನವಿ ಮಾಡಿದರು.
ಒಂದು ವೇಳೆ ನಮ್ಮ ಮನವಿಗೆ ಸರ್ಕಾರ ಸ್ಪಂದಿಸದಿದ್ದರೆ ಆ. 12 ರಂದು ಬೆಂಗಳೂರಿನ ಪ್ರಿಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ಮಾಡುತ್ತೇವೆ. ಅಂದು ಕೂಡಾ ಸರ್ಕಾರ ನಿರ್ಲಕ್ಷ್ಯ ವಹಿಸಿದರೆ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಅವರು ತಿಳಿಸಿದರು.
ಈ ವೇಳೆ ಶಿವಾನಂದ ದೊಡ್ಡಬಸವಣ್ಣವರ, ಸುರೇಶ್ ನಾವಲಗಿ, ರಾಜು ಬಚಕಟ್ಟಿ, ಜರೀನಾ ಅತ್ತಾರ, ರೇಖಾ ಅಂಗಡಿ, ರಾಜು ಕೋಲಕಾರ್, ಶೈಲಾ ಹಂಪಿಹೊಳಿ, ಅನೀಲ ಕಾಂಬಳೆ, ಎಸ್ ಸಿ ಮೂಮವಳ್ಳಿ, ಆರ್ ವಾಯ್ ಲೆಂಕನಟ್ಟಿ ಸೇರಿದಂತೆ ಮತ್ತಿತರ ಶಿಕ್ಷಕರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ