Latest

ಶಿಕ್ಷಕನಿಂದ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಪ್ರಾಚಾರ್ಯ ಸೇರಿ ಇಬ್ಬರ ಬಂಧನ

ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ವಸತಿ ಶಾಲೆಯ ಪ್ರಾಚಾರ್ಯ ಹಾಗೂ ಕಂಪ್ಯೂಟರ್ ಆಪರೇಟರ್ ಇಬರು ಫೌಢಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದು, ಪೋಷಕರು ಸಾರ್ವಜನಿಕರು ಪ್ರಾಚಾರ್ಯರನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನಲ್ಲಿ ನಡೆದಿದೆ.

ಚಿಂಚೋಳಿ ವಸತಿ ಶಾಲೆಯ ಪ್ರಾಚಾರ್ಯರು ಹಾಗೂ ಕಂಪ್ಯೂಟರ್ ಆಪರೇಟರ್ ವಿದ್ಯಾರ್ಥಿನಿಯರ ಮೈಕೈ ಮುಟ್ಟಿ ಮಾತನಾಡಿಸುವುದು, ಅಶ್ಲೀಲವಾಗಿ ಮಾತನಾಡುವುದು, ಅಸಭ್ಯ ವರ್ತನೆ ತೋರುವುದು, ಹಾಸ್ಟೇಲ್ ನಲ್ಲಿ ವಿದ್ಯಾರ್ಥಿನಿಯರು ಮಲಗಿದ್ದರೆ ಕಿಟಕಿಯಲ್ಲಿ ಇಣುಕಿ ನೋಡುವುದು ಹೀಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ.

Home add -Advt

ಸಮಾಜ ಕಲ್ಯಾಣ ಇಲಾಖೆಯು ಈ ವಸತಿ ಶಾಲೆ ನಿರ್ವಹಿಸುತ್ತಿದ್ದು, ವಿಷಯ ತಿಳಿಯುತ್ತಿದ್ದಂತೆ ಶಾಲೆಗೆ ನುಗ್ಗಿದ ಪೋಷಕರು ಪ್ರಾಚಾರ್ಯ ಹಾಗೂ ಕಂಪ್ಯೂಟರ್ ಆಪರೇಟರ್ ನನ್ನು ಹಿಡಿದು ಥಳಿಸಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯ ಚಿಂಚೋಳಿ ಸಹಾಯಕ ನಿರ್ದೇಶಕ ಪ್ರಭುಲಿಂಗ ವಾಲಿ ಶಾಲಾ ಪ್ರಾಚಾರ್ಯ ಹಾಗೂ ಕಂಪ್ಯೂಟರ್ ಆಪರೇಟರ್ ವಿರುದ್ಧ ಪೋಕ್ಸೋ, ಅಟ್ರಾಸಿಟಿ ಕಾಯ್ದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು, ಕುಂಚಾವರಂ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ತವರಿನಿಂದ ಬರಲೊಪ್ಪದ ಪತ್ನಿಯನ್ನು ಗುಂಡು ಹಾರಿಸಿ ಬೆದರಿಸಿದ ಭೂಪ

https://pragati.taskdun.com/latest/athanifiring-on-wifetrheatman-arrested/

 

Related Articles

Back to top button