ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಾರ್ಖಂಡ ರಾಜ್ಯದಲ್ಲಿರುವ ಜೈನರ ಶ್ರದ್ಧಾ ಸ್ಥಳ ಸಮ್ಮೇದ ಶಿಖರಜಿಯನ್ನು ಪ್ರವಾಸಿ ತಾಣವಾಗಿಸುವ ನಿರ್ಧಾರವನ್ನು ಹಿಂಪಡೆಯಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೈನ ಯುವ ಸಂಘಟನೆ ಪದಾಧಿಕಾರಿಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು.
ಜೈನ ಧರ್ಮೀಯರಿಗೆ ಮೀಸಲಾತಿ ಒದಗಿಸುವುದು, ಜೈನ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ ಪ್ರಾಚೀನ ಜೈನ ಬಸದಿಗಳು,ಶಾಸನಗಳು ಮತ್ತು ಅವುಗಳ ಸಂರಕ್ಷಣೆ ಮತ್ತು ನಿರ್ವಹಣೆ ಸೇರಿದಂತೆ ಇನ್ನೂ ಹಲವು ಬೇಡಿಕೆಗಳನ್ನೊಳಗೊಂಡ ಮನವಿಯನ್ನು
ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಮನವಿ ಸ್ವೀಕರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಕಾರಾತ್ಮಕ ವಾಗಿ ಸ್ಪಂದಿಸಿದರು.
ಈ ಸಂದರ್ಭದಲ್ಲಿ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಸೇರಿದಂತೆ ಜೈನ ಯುವ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
*ಮೀಸಲಾತಿ ಬಿಕ್ಕಟ್ಟು; ಕಾಂಗ್ರೆಸ್ ನಿಲುವಿನ ಬಗ್ಗೆ ಡಿ.ಕೆಶಿವಕುಮಾರ್ ಹೇಳಿದ್ದೇನು?*
https://pragati.taskdun.com/d-k-shivakumarpresseetbelagavicongress-ticket/
*ಡಿ.22 ರಿಂದ 30 ರವರೆಗೆ ಬೆಳಗಾವಿಯಲ್ಲಿ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳ ‘ಅಸ್ಮಿತೆ’ ವ್ಯಾಪಾರ ಜಾತ್ರೆ- 2022
https://pragati.taskdun.com/a-huge-exhibition-and-sale-fair-in-belgaum-from-december-22-to-30-ashmite-trade-fair-2022-ilakal-saree-kinna-doll-khadi-product-available/
*ರಾಜ್ಯದಲ್ಲಿ ಮತ್ತೆ ಕೊರೊನಾ ಆತಂಕ*
https://pragati.taskdun.com/karnatakacovid-alertdr-sudhakarbbmpmask/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ