Film & EntertainmentKannada NewsKarnataka NewsNationalPolitics
*ಬಿ.ಸರೋಜಾ ದೇವಿ ಹೆಸರಿನಲ್ಲಿ ಚಲನಚಿತ್ರ ಪ್ರಶಸ್ತಿ ಘೋಷಿಸಿ: ಸಿಎಂಗೆ ಮನವಿ*

ಪ್ರಗತಿವಾಹಿನಿ ಸುದ್ದಿ: ಕನ್ನಡ ಚಲನಚಿತ್ರದ ಖ್ಯಾತ ನಟಿ ದಿ ಬಿ.ಸರೋಜಾ ದೇವಿ ಹೆಸರಿನಲ್ಲಿ ಚಲನಚಿತ್ರ ಪ್ರಶಸ್ತಿ ಘೋಷಿಸಿ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ನಟಿ ಹಾಗೂ ಬಿಜೆಪಿ ಮುಖಂಡರಾಗಿರುವ ತಾರಾ ಅನುರಾಧ ಅವರು ಮನವಿ ಸಲ್ಲಿಸಿದ್ದಾರೆ.
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಈ ಮನವಿಯನ್ನು ಸಲ್ಲಿಸಿದರು. ಅಲ್ಲದೇ ಈ ಸಂಬಂಧ ಸಿಎಂ ಜೊತೆ ಚರ್ಚೆ ನಡೆಸಿದರು.
ಈ ಕುರಿತು ಸಿಎಂ ಅವರ ಎಕ್ಸ್ ಖಾತೆಯಲ್ಲಿ ಪೋಟೋ ಸಮೇತ ವಿಚಾರ ತಿಳಿಸಲಾಗಿದೆ. ಹಿರಿಯ ಕಲಾವಿದೆ ಬಿ.ಸರೋಜಾದೇವಿ ಅವರ ಹೆಸರಿನಲ್ಲಿ ಚಲನಚಿತ್ರ ಪ್ರಶಸ್ತಿ ಘೋಷಣೆ ಮಾಡುವಂತೆ ನಟಿ ತಾರಾ ಅನುರಾಧ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು ಎಂದು ಬರೆಯಲಾಗಿದೆ.