Belagavi NewsBelgaum NewsKannada NewsKarnataka NewsPolitics

*ಬಕ್ರೀದ್ ಹಬ್ಬದ ವೇಳೆ ಗೋ ಹತ್ಯೆ ತಡೆಯಿರಿ: ಡಿಸಿಗೆ ಮನವಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಹಾಗೂ ವಿವಿಧ ಸ್ವಾಮೀಜಿಗಳ ನೇತೃತ್ವದಲ್ಲಿ ಇಂದು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿ, ಗೋ ಹತ್ಯೆ ತಡೆಯುವಂತೆ ಆಗ್ರಹಿಸಿಲಾಯಿತು.

ಇಂದು ಬೆಳಗಾವಿ ನಗರದ ಕನ್ನಡ ಸಾಹಿತ್ಯ ಭವನದಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಲಾಯಿತು.‌

Home add -Advt

ಬಕ್ರೀದ್ ಹಬ್ಬದ ನೇಪದಲ್ಲಿ ಅಕ್ರಮ ಗೋ ಸಾಗಾಟ ಮತ್ತು ಗೋ ಹತ್ಯೆಯಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ನಿಷೇಧವಿದ್ದರೂ ಸಹಿತ ಅಕ್ರಮ ಗೋ ಸಾಗಾಟ ಮತ್ತು ಗೋ ಹತ್ಯೆ ಜಿಲ್ಲೆಯಾದ್ಯಂತ ನಿರಂತರವಾಗಿ ನಡೆಯುತ್ತಲೇ ಇದೆ. ಜಿಲ್ಲಾಡಳಿತ ಇದಕ್ಕೆ ಕಡಿವಾಣ ಹಾಕಬೇಕು. ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಅಕ್ರಮ ಗೋವು ಸಾಗಾಟ ಮತ್ತು ಗೋವು ಹತ್ಯೆಯಾಗದಂತೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಆದೇಶ ಹೊರಡಿಸಬೇಕು. 

ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಜಿಲ್ಲೆಯ ಎಲ್ಲಾ ಪ್ರಮುಖ ಕೇಂದ್ರಗಳಲ್ಲಿ ಪರಿಶೀಲನೆ ತಂಡ ನೇಮಿಸಿ, ಪೊಲೀಸ್ ಇಲಾಖೆಯಿಂದ ಚೆಕ್ ಪೋಸ್ಟ್ ಗಳನ್ನು ನಿರ್ಮಾಣ ಮಾಡಬೇಕು. ಜಿಲ್ಲೆಯಾದ್ಯಂತ ಮೇ‌. 29ರ ವರೆಗೆ ಗೋವು ಮಾರಾಟ ಮತ್ತು ಜಾನುವಾರ ಸಂತೆ ನಿಷೇಧಿಸಬೇಕು ಹಾಗೂ ಗೋವು ರಕ್ಷಕರಿಗೆ ಸಹಕಾರ ನೀಡಬೇಕು ಎಂದು ಪ್ರತಿಭಟನಾಲಾರರು ಆಹ್ರಹಿಸಿದರು.

Related Articles

Back to top button