Belagavi NewsBelgaum NewsKannada NewsKarnataka NewsPolitics

*ನಾಡಿಗಾಗಿ ಹೋರಾಡುತ್ತಿರುವ ಕನ್ನಡಿಗರ ಮೇಲಿನ ಕೇಸ್ ರದ್ದುಪಡಿಸಿ: ಗೃಹ ಸಚಿವರಿಗೆ ಮನವಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಾಡಿನ ನೆಲ, ಜಲ ಮತ್ತು ಭಾಷೆಯ ಹಿತಕ್ಕಾಗಿ ಹೋರಾಡಿ ಮೊಕದ್ದಮೆ ಎದುರಿಸುತ್ತಿರುವ ನೂರಾರು ಕನ್ನಡಪರ ಹೋರಾಟಗಾರರ ಮೇಲಿನ ಕೇಸ್‌ಗಳನ್ನು ರದ್ದುಗೊಳಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಗೃಹ ಸಚಿವ ಡಾ. ಜಿ ಪರಮೇಶ್ವರಗೆ ಮನವಿ ಸಲ್ಲಿಸದೆ.

ಬೆಳಗಾವಿ ನಗರದಲ್ಲಿ ಶುಕ್ರವಾರ ವಿವಿಧ ಕಾಮಗಾರಿಗಳ ಉದ್ಘಾನಟೆ ಹಾಗೂ ಶಂಕುಸ್ಥಾಪನೆಗೆ ಆಗಮಿಸಿದ ಗೃಹ ಸಚಿವ ಡಾ. ಜಿ ಪರಮೇಶ್ವರ ಅವರಿಗೆ ಕರ್ನಾಟಕ ರಕ್ಷಣಾ ವೇದಿಕೆ ಮನವಿ ಸಲ್ಲಿಸಿದೆ.

Home add -Advt

ಕರ್ನಾಟಕದ ನೆಲ, ಜಲ ಹಾಗೂ ಭಾಷೆಯ ರಕ್ಷಣೆಗಾಗಿ ಹೋರಾಟ ನಡೆಸಿದ ನೂರಾರು ಕನ್ನಡಪರ ಹೋರಾಟಗಾರರ ಮೇಲೆ ದಾಖಲಾಗಿರುವ ಸಾವಿರಾರು ಮೊಕದ್ದಮೆಗಳನ್ನು ತಕ್ಷಣವೇ ಹಿಂಪಡೆಯಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆಯ ಬೆಳಗಾವಿ ಜಿಲ್ಲಾ ಘಟಕ ಸರ್ಕಾರವನ್ನು ಆಗ್ರಹಿಸಿದೆ. 

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಮುಖ್ಯಮಂತ್ರಿಗಳಿಗೆ ಮತ್ತು ತಮಗೆ ಅನೇಕ ಬಾರಿ ಮನವಿ ಸಲ್ಲಿಸಿದರೂ, ಅದು ಕೇವಲ ಭರವಸೆಯಾಗಿಯೇ ಉಳಿದಿದೆ ಹೊರತು ಕಾರ್ಯರೂಪಕ್ಕೆ ಬಂದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದೆ. 

ನಾಡಿನ ಹಿತಕ್ಕಾಗಿ ಬೀದಿಗಿಳಿದು ಹೋರಾಡಿದ ಕನ್ನಡಿಗರು ಇಂದು ನ್ಯಾಯಾಲಯಗಳಿಗೆ ಅಲೆದಾಡುವಂತಾಗಿದೆ. ಇದರಿಂದ ಹೋರಾಟಗಾರರು ವರ್ಷಗಳಿಂದ ಮಾನಸಿಕ ಹಾಗೂ ಆರ್ಥಿಕ ವೇದನೆ ಅನುಭವಿಸುತ್ತಿದ್ದಾರೆ. ಈ ಕೂಡಲೇ ಸರ್ಕಾರವು ಗಂಭೀರವಾಗಿ ಈ ವಿಚಾರವನ್ನು ಪರಿಗಣಿಸಿ, ಹೋರಾಟಗಾರರ ಮೇಲಿನ ಎಲ್ಲಾ ಕೇಸ್‌ಗಳನ್ನು ರದ್ದುಗೊಳಿಸಬೇಕು. ಆ ಮೂಲಕ ಪ್ರಸ್ತುತ ಸರ್ಕಾರವು ನಿಜವಾದ ‘ಕನ್ನಡಿಗರ ಮತ್ತು ಕನ್ನಡಪರ ಸರ್ಕಾರ’ ಎಂಬುದನ್ನು ಸಾಬೀತುಪಡಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ವಿನಂತಿಸಿದ್ದಾರೆ.

ಈ ಸಂದರ್ಭದಲ್ಲಿ ದೀಪಕ ಗುಡಗನಟ್ಟಿ, ಗಣೇಶ ರೋಕಡೆ, ಲೋಕೇಶ ರಾಠೋಡ, ಅರ್ಜುನ ಕಾಂಬಳೆ, ಗಂಗಾರಾಮ ಶೀಗಿಹಳ್ಳಿ, ನಾಗರಾಜ ಲಕ್ಕಪ್ಪಗೊಳ್ ಹಾಗೂ ವಿರೇಶ ಹುನಶಿಮರದ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

Related Articles

Back to top button