Kannada NewsLatest

ಖಾನಾಪುರ ತಾಲೂಕಿನ ವಿವಿಧ ಶಾಲೆಗಳ ಕಾಯಕಲ್ಪಕ್ಕಾಗಿ ಸಚಿವರಿಗೆ ಮನವಿ

ಪ್ರಗತಿವಾಹಿನಿ ಸುದ್ದಿ, ಖಾನಾಪುರ:  ೧೧೦ ವರ್ಷಗಳ ಇತಿಹಾಸ ಹೊಂದಿರುವ ಮತ್ತು ಇತ್ತೀಚೆಗಷ್ಟೇ ಶತಮಾನೋತ್ಸವ ಆಚರಿಸಿಕೊಂಡಿರುವ ಪಟ್ಟಣದ ಶಾಸಕರ ಮಾದರಿ ಕನ್ನಡ ಶಾಲೆ ಸೇರಿದಂತೆ ತಾಲೂಕಿನ ವಿವಿಧ ಭಾಗಗಳ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳ ಕಾಯಕಲ್ಪಕ್ಕಾಗಿ ಅನುದಾನ ಒದಗಿಸುವಂತೆ ಆಗ್ರಹಿಸಿ ತಾಲೂಕಿನ ನಾಗರಿಕರು ಸೋಮವಾರ ಶಿಕ್ಷಣ ಸಚಿವ ಸುರೇಶಕುಮಾರ ಅವರಿಗೆ ಮನವಿಗಳನ್ನು ಸಲ್ಲಿಸಿದರು.

ಪಟ್ಟಣದ ಶಾಸಕರ ಮಾದರಿ ಕನ್ನಡ ಶಾಲೆಯಲ್ಲಿ ಸಚಿವರಿಗೆ ಮನವಿ ಸಲ್ಲಿಸಿದ ತಾಲೂಕಿನ ವಿವಿಧ ಭಾಗಗಳ ನಾಗರಿಕರು ಲಿಂಗನಮಠ ಗ್ರಾಮದಲ್ಲಿ ಸರ್ಕಾರಿ ಪಿಯು ಕಾಲೇಜು ಪ್ರಾರಂಭಿಸುವಂತೆ, ಪಟ್ಟಣದ ಸರ್ಕಾರಿ ಪಿಯು ಕಾಲೇಜಿಗೆ ಅಗತ್ಯ ಮೂಲಸೌಕರ್ಯ ಮತ್ತು ಉಪನ್ಯಾಸಕರನ್ನು ಒದಗಿಸುವಂತೆ, ವಿವಿಧ ಶಾಲೆಗಳಿಗೆ ಶಿಕ್ಷಕರು, ಕಟ್ಟಡ, ಮೂಲಸೌಕರ್ಯ ಒದಗಿಸುವಂತೆ ಸಚಿವರ ಗಮನ ಸೆಳೆದರು. ಸಾರ್ವಜನಿಕರಿಂದ ಮನವಿ ಸ್ವೀಕರಿಸಿದ ಸಚಿವರು ಆದ್ಯತೆ ಮೇರೆಗೆ ಸಾರ್ವಜನಿಕರ ಅಹವಾಲುಗಳನ್ನು ಪರಿಹರಿಸುವುದಾಗಿ ಹೇಳಿದರು. ಈ ಸಂದರ್ಭದಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ಇದ್ದರು.

 

 

Home add -Advt

Related Articles

Back to top button