ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಗ್ರಾಮ ಕಾಯಕ ಮಿತ್ರ ಹುದ್ದೆಗೆ ಜಿಲ್ಲೆಯಲ್ಲಿ ೨೦೨೦-೨೧ನೇ ಸಾಲಿನಲ್ಲಿ ೨೦ ಸಾವಿರ ಮಾನವ ದಿನಗಳಿಗಿಂತ ಹೆಚ್ಚಿನ ಉದ್ಯೋಗ ಸೃಜನೆ ಮಾಡಿದ ಗ್ರಾಮ ಪಂಚಾಯಿತಿಗಳಲ್ಲಿ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಸಂಬಂಧಿಸಿದ ಅರ್ಜಿದಾರರು, ತಮಗೆ ಸಂಬಂಧಿಸಿದ ಗ್ರಾಮ ಪಂಚಾಯಿತಿಗಳಲ್ಲಿ ಅ.೧೬ ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಗ್ರಾಮ ಪಂಚಾಯಿತಿಗೆ ಒಂದರಂತೆ ಅಥಣ ೧೨, ಬೈಲಹೊಂಗಲ್ ೦೭, ಬೆಳಗಾವಿಯ ೦೩, ಚಿಕ್ಕೋಡಿ ೦೭, ಗೋಕಾಕದಲ್ಲಿರುವ ೦೪, ಹುಕ್ಕೇರಿಯ ೧೩, ಕಾಗವಾಡದ ೦೨, ಖಾನಾಪುರ ೧೫, ಕಿತ್ತೂರಿನ ೦೧,ಮೂಡಲಗಿಯಲ್ಲಿರುವ ೦೩, ನಿಪ್ಪಾಣ ಯ ೦೪, ರಾಯಬಾಗದ ೦೮, ರಾಮದುರ್ಗದ ೦೭ ಹಾಗೂ ಸವದತ್ತಿಯಲ್ಲಿರುವ ೧೧ ಗ್ರಾಮ ಪಂಚಾಯಿತಿಗಳು ಸೇರಿದಂತೆ ಒಟ್ಟು ೧೪ ತಾಲೂಕುಗಳಲ್ಲಿರುವ ೯೭ ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮ ಕಾಯಕ ಮಿತ್ರ ಹುದ್ದೆಗೆ ನೇಮಕಾತಿ ನಡೆಯಲಿದೆ.
ತಾಲೂಕು ಆಯ್ಕೆ ಸಮಿತಿಯು ಅರ್ಜಿಗಳನ್ನು ಪರಿಶೀಲಿಸಿ, ಮೆರಿಟ್ ಪಟ್ಟಿ ತಯಾರಿಸಿ ಗ್ರಾಮ ಪಂಚಾಯತಿಯಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಅ.೨೧ ರಂದು ಪ್ರಕಟಿಸುತ್ತದೆ. ತಾತ್ಕಾಲಿಕ ಪಟ್ಟಿಗೆ ಆಕ್ಷೇಪಣೆಗಳನ್ನು ಅ.೨೮ ರ ಒಳಗಾಗಿ ಸಲ್ಲಿಸಬೇಕು. ಜಿಲ್ಲಾ ಮಟ್ಟದ ಸಮಿತಿಯು ಅಂತಿಮ ಆಯ್ಕೆ ಪಟ್ಟಿಯನ್ನು ಸೆಪ್ಟೆಂಬರ್ ೦೬ ರಂದು ಪ್ರಕಟಿಸಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ದರ್ಶನ್ ಹೆಚ್.ವಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಹಿರಂಗ ಸಭೆಯಲ್ಲಿ ನೋವು ತೋಡಿಕೊಂಡ ವಿಶ್ವೇಶ್ವರ ಹೆಗಡೆ ಕಾಗೇರಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ