Kannada NewsKarnataka NewsLatest

ಸರ್ವೋತ್ತಮ ಸೇವಾ ಪ್ರಶಸ್ತಿಗೆ ಅರ್ಜಿ ಆಹ್ವಾನ, ಮತ್ತಿತರ ಪ್ರಮುಖ ಸುದ್ದಿಗಳು

ಸರ್ವೋತ್ತಮ ಸೇವಾ ಪ್ರಶಸ್ತಿಗೆ ಅರ್ಜಿ ಆಹ್ವಾನ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ  : ಅತ್ಯುತ್ತಮ ಸೇವೆಗೈದ, ಸಾಧನೆ ಮಾಡಿದ ರಾಜ್ಯ ಸರ್ಕಾರಿ ನೌಕರರಿಗೆ ಅತ್ಯುತ್ತಮ ಸೇವಾ ಪ್ರಶಸ್ತಿ ನೀಡಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ರಾಜ್ಯ ಸರ್ಕಾರವು, ಸರ್ಕಾರದ ಕಾರ್ಯನಿರ್ವಹಣೆಯಲ್ಲಿ ಸುಧಾರಣೆಯನ್ನು ತರುವ ಮೂಲಕ ನಾಗರಿಕರಿಗೆ ಗುಣಮಟ್ಟದ ಸೇವೆಯನ್ನು ನೀಡಿದ, ನಾಗರಿಕರಿಗೆ ಸೇವಾ ವ್ಯವಸ್ಥೆಯಲ್ಲಿ ಗುಣಾತ್ಮಕ, ನಾಗರಿಕ ಸ್ನೇಹಿ ಮತ್ತು ಭ್ರಷ್ಠಾಚಾರ ರಹಿತ ವಾತಾವರಣ ನಿರ್ಮಾಣ, ಮೌಲ್ಯವರ್ಧಿತ ಸೇವೆ, ವೃದ್ದಿ, ಮುಂದಾಳತ್ವ ಮತ್ತು ಚಲನಶೀಲಗಳ ರಚನೆ, ನಾಗರಿಕ ಅವಶ್ಯಕತೆಗೆ ಅಮುಗುಣವಾಗಿ ವಿನೂತನ ಪದ್ದತಿಯನ್ನು ಅಳವಡಿಸುವುದು.
ನೈಸರ್ಗಿಕ ವಿಕೋಪದ ಸಂದರ್ಭದಲ್ಲಿ ಅತ್ಯುನ್ನತ ಕಾರ್ಯನಿರ್ವಹಣೆ, ಸಹಜ ಕಾರ್ಯನಿರ್ವಹಣೆಯೊಂದಿಗೆ ನಾಗರಿಕರಿಗೆ ವಿಶೇಷ ರೀತಿಯ ಸೇವೆಗಳನ್ನು ಒದಗಿಸಿದವರನ್ನು ಮತ್ತು ಕಚೇರಿ ಪರಿಸರದಲ್ಲಿ ವಿಶೇಷ ವಿಭಿನ್ನ ಸಾಧನೆಯನ್ನು ಮಾಡಿದವುದು. ಇಲಾಖೆ/ ಸಂಸ್ಥೆಯ ಕಾರ್ಯನಿರ್ವಾಹಣೆಯಲ್ಲಿ ಸುಧಾರಣೆ ತಂದು ಅದ್ಭುತವಾದ ರೀತಿಯಲ್ಲಿ ಗಣನೀಯ ಕಾರ್ಯನಿರ್ವಹಣೆ, ವಿನೂತನತೆಯನ್ನು ಕಾರ್ಯರೂಪಕ್ಕೆ ತರುವುದು ಮತ್ತು ರಚನಾತ್ಮಕ ರೀತಿಯಲ್ಲಿ ಮುಂದಾಳತ್ವ ವಹಿಸುವುದು.
ನಾಗರಿಕರಿಗೆ ನೀಡುವ ಸೇವೆಯಲ್ಲಿ ಗಮನಾಹ್ ಸುಧಾರಣೆಯನ್ನು ಮಾಡುವುದು, ದೀರ್ಘ ಸಮಯದ ಫಲಿತಾಂಶ ಸಾಧನೆ, ನಿಗದಿತ ಫಲಿತಾಂಶ ಸಾಧನೆಗೆ ಸರಳೀಕೃತ ಕಾರ್ಯವಿಧಾನ ವ್ಯವಸ್ಥೆ ಸರ್ಕಾರದ/ ಸಾರ್ವಜನಿಕ ಹಣದ ಉಳಿತಾಯ ಮಾಡಿದ ರಾಜ್ಯ ಸರ್ಕಾರಿ ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ಯನ್ನು ನೀಡಿ ಸೇವೆಯನ್ನು ಗುರುತಿಸಲಾಗುವುದು.
ರಾಜ್ಯದಲ್ಲಿ ಪ್ರತಿ ಜಿಲ್ಲೆಗೆ ೧೦ ಜಿಲ್ಲಾ ಮಟ್ಟದ ಪ್ರಶಸ್ತಿಗಳನ್ನು ೧೦,೦೦೦ ರೂಪಾಯಿ ನಗದು ಬಹುಮಾನದೊಂದಿಗೆ ನೀಡಿ ಗೌರವಿಸಲಾಗುವುದು.
ರಾಜ್ಯ ಸರ್ಕಾರಿ ನೌಕರರು ನಾಮನಿರ್ದೇಶನಗಳನ್ನು ಆನ್ ಲೈನ್ ಮೂಲಕ ವೆಬ್ ಸೈಟ್  http://dparar.karnataka.gov.in, http://sarvothamaawards.karnataka.gov.in ನಲ್ಲಿ ಏಪ್ರಿಲ್ ೦೪ ೨೦೨೨ರೊಳಗೆ ಸಲ್ಲಿಸಬೇಕೆಂದು ಬೆಳಗಾವಿ ಅಪರ ಜಿಲ್ಲಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮನೆ ನಿರ್ಮಾಣ: ಅರ್ಜಿ ಆಹ್ವಾನ

ಬೆಳಗಾವಿ – ಅಂಕಲಗಿ-ಅಕ್ಕತಂಗೇರಹಾಳ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ೨೦೨೧-೨೨ ನೇ ಸಾಲಿನ ವಾಜಪೇಯಿ ನಗರ ವಸತಿ ಯೋಜನೆ ಮತ್ತು ಡಾ|| ಬಿ.ಆರ್. ಅಂಬೇಡ್ಕರ ನಗರ ನಿವಾಸ್ ಯೋಜನೆಯಡಿಯಲ್ಲಿ ನಿವೇಶನ ಹೊಂದಿದ ಫಲಾನುಭವಿಗಳಿಗೆ ವಸತಿ ಕಲ್ಪಿಸಲು ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.
ವಾಜಪೇಯಿ ನಗರ ವಸತಿ ಯೋಜನೆಯಡಿಯಲ್ಲಿ ಸಾಮಾನ್ಯ ಹಾಗೂ ಅಲ್ಪ ಸಂಖ್ಯಾತರಿಗೆ ಸೇರಿ ಒಟ್ಟು ೩೮ ಹಗೂ ಡಾ. ಬಿ.ಆರ್.ಅಂಬೇಡ್ಕರ್ ನಿವಾಸ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡಕ್ಕೆ ಸೇರಿ ಒಟ್ಟು ೧೨ ಮನೆಗಳು ಮಂಜೂರಾಗಿದ್ದು ಫಲಾನುಭವಿಗಳು ಸೂಕ್ತದಾಖಲಾತಿಗಳೊಂದಿಗೆ ಏಪ್ರಿಲ್ ೫ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಸಲ್ಲಿಸಬೇಕಾದ ದಾಖಲಾತಿಗಳು:
ಚಾಲ್ತಿ ವರ್ಷದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ(ಕಡ್ಡಾಯ), ನಿವೇಶನದ ಖಾತಾ ಝರಾಕ್ಸ ಪ್ರತಿ(ಕಡ್ಡಾಯ), ಆಧಾರ ಕಾರ್ಡ (ಫಲಾನುಭವಿ ಮತ್ತು ಕುಟುಂಬ ಸದಸ್ಯರು) (ಕಡ್ಡಾಯ), ರೇಶನ ಕಾರ್ಡ (ಕಡ್ಡಾಯ), ಅರ್ಜಿದಾರರ ಬ್ಯಾಂಕ್ ಪಾಸ ಬುಕ್ ಝರಾಕ್ಸ (ಕಡ್ಡಾಯ), ಮತದಾರರ ಗುರುತಿನ ಚೀಟಿ ಝರಾಕ್ಸ (ಕಡ್ಡಾಯ), ೨೦ರೂ. ಬಾಂಡ್ (ವಸತಿ ಯೋಜನೆಯಲ್ಲಿ ಯಾವುದೇ ಸೌಲಭ್ಯ ಪಡೆದಿರುವದಿಲ್ಲ ಬಗ್ಗೆ ಪ್ರಮಾಣ ಪತ್ರ.(ಕಡ್ಡಾಯ).
ಹೆಚ್ಚಿನ ಮಾಹಿತಿಗಾಗಿ ಪಟ್ಟಣ ಪಂಚಾಯಿತಿಯನ್ನು ಸಂಪರ್ಕಿಸಬಹುದು ಎಂದು ಮುಖ್ಯಾಧಿಕಾರಿ ಬಸವರಾಜ ಮನಗೂಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೆಟ್ರಿಕ್ ನಂತರ ವಿದ್ಯಾರ್ಥಿವೇತನ

ಬೆಳಗಾವಿ  : ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-೧ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ, ೨೦೨೧-೨೨ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ, ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು.
ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು ಮಾರ್ಚ ೩೧ ರವರೆಗೆ ನಿಗದಿಪಡಿಸಲಾಗಿತ್ತು, ಕೆಲವೊಂದು ಕೋರ್ಸಗಳಾದ ಎಂ.ಬಿ.ಬಿ.ಎಸ್, ಎಂ.ಡಿ, ಎಲ್,ಎಲ್,ಬಿ, ಎಲ್,ಎಲ್,ಎಂ ಹಾಗೂ ಇತರೆ ಕೋರ್ಸಗಳ ಪ್ರವೇಶ ಪ್ರಕ್ರಿಯೆ ಪ್ರಗತಿಯಲ್ಲಿರುವುದರಿಂದ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಏಪ್ರಿಲ್ ೩೦ ರವರೆಗೆ ವಿಸ್ತರಿಸಲಾಗಿದೆ.
೨೦೨೧-೨೨ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಶುಲ್ಕಮರುಪಾವತಿ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಿರುವ ಹಿಂದುಳಿದ ವರ್ಗಗಳ ಅರ್ಹ ನವೀಕರಣ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಮಂಜೂರು ಮಾಡುವ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ವಿದ್ಯಾರ್ಥಿಗಳಿಗೆ ಒಂದು ತಿಂಗಳೊಳಗಾಗಿ ಶುಲ್ಕ ಮರುಪಾವತಿಯನ್ನು ಮಂಜೂರು ಮಾಡಿ ಆಧಾರ ಜೋಡಣೆಯಾಗಿರುವ ವಿದ್ಯಾರ್ಥಿಗಳ ಬ್ಯಾಂಕ ಖಾತೆಗೆ ನೇರವಾಗಿ ಡಿ.ಬಿ.ಟಿ ಮುಖಾಂತರ ಜಮೆ ಮಾಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್‌ಸೈಟ್ ವಿಳಾಸ:  http://www.ssp.postmatric.karnataka.gov.in ಕಾರ್ಯಕ್ರಮಗಳ ವಿವರ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಅದೇಶಗಳ ಬಗ್ಗೆ ಮಾಹಿತಿಗಾಗಿ ಭೇಟಿ ನೀಡಬೇಕಾದ ವೆಬ್ ಸೈಟ್ ವಿಳಾಸ: http://www.bcwd.karnataka.gov.in ಇಲಾಖೆಯ ಸಹಾಯವಾಣಿ ಸಂಖ್ಯೆ : ೮೦೫೦೭೭೦೦೦೫ / ೮೦೫೦೭೭೦೦೦೪ ಇಮೇಲ್:  [email protected] ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಸಂಖ್ಯೆ: ೦೮೦-೩೫೨೫೪೭೫೭ ಇಮೇಲ್: [email protected]  ಗೆ ಸಂಪರ್ಕಿಸಬಹುದೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳಾದ ಗೌರಿಶಂಕರ ಕಡೇಚೂರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಂಬೇಡ್ಕರ್ ಜಯಂತಿ ಹಾಗೂ ಗುಡ್‌ಫ್ರೈಡೆ: ವಿಶೇಷ ಬಸ್ ವ್ಯವಸ್ಥೆ

ಬೆಳಗಾವಿ : ಅಂಬೇಡ್ಕರ್ ಜಯಂತಿ ಹಾಗೂ ಗುಡ್ ಫ್ರೈಡೆ ಸಾರ್ವತ್ರಿಕ ರಜೆಗಳ ಹಿನ್ನೆಲೆ ಬೆಂಗಳೂರು, ಮುಂಬಯಿ ಮತ್ತು ಪೂನಾಗಳಿಂದ ಹೆಚ್ಚುವರಿ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಅಂಬೇಡ್ಕರ್ ಜಯಂತಿ ಕಾರಣ ಏಪ್ರಿಲ್ ೧೪ ರಂದು, ಗುಡ್ ಫ್ರೈಡೆಯ ಏಪ್ರಿಲ್ ೧೫ ರಂದು, ಏಪ್ರಿಲ್ ೧೬ ರಂದು ಪರಮಿತ ರಜೆ ಹಾಗೂ ಏಪ್ರಿಲ್ ೧೭ ರಂದು ಭಾನುವಾರ(ಸಾರ್ವತ್ರಿಕ ರಜೆ) ಇರುವುದರಿಂದ ಬೆಂಗಳೂರಿನಿಂದ ಬೆಳಗಾವಿ ವಿಭಾಗದ ವ್ಯಾಪ್ತಿಯ ಸ್ಥಳಗಳಿಗೆ ಬರುವಂಥ ಪ್ರಯಾಣಿಕರಿಗೆ ಜನದಟ್ಟಣೆಯ ಹೆಚ್ಚಳವನ್ನು ಅವಲೋಕಿಸಿ ಏಪ್ರಿಲ್ ೧೩ ರಂದು ಬೆಂಗಳೂರು ಕೆಂಪೇಗೌಡ ಬಸ್ ನಿಲ್ದಾಣ, ಮುಂಬಯಿ ಮತ್ತು ಪೂನಾಗಳಿಂದ ಬೆಳಗಾವಿಗೆ ವಿವಿಧ ಮಾದರಿಯ ಒಟ್ಟು ೩೦ ಹೆಚ್ಚುವರಿ ವಿಶೇಷ ವಾಹನಗಳ ವ್ಯವಸ್ಥೆ ಮಾಡಲಾಗಿದೆ.

ಮರಳಿ ಬೆಳಗಾವಿಯಿಂದ ಬೆಂಗಳೂರು ಕೆಂಪೇಗೌಡ ಬಸ್ ನಿಲ್ದಾಣ, ಮುಂಬಯಿ ಮತ್ತು ಪೂನಾಗಳಿಗೆ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದ್ದು, ಈ ಸಾರಿಗೆಗೆ ಇ- ಟಿಕೆಟ್‌ನ್ನು ಆನ್‌ಲೈನ್  http://www.ksrtc.in, www.nwkrtc.in ಹಾಗೂ ಮೊಬೈಲ್ ಮುಖಾಂತರವೂ ಪಡೆಯಬಹುದಾಗಿದೆ. ಸಂಸ್ಥೆಯಿಂದ ನಿಗದಿಪಡಿಸಿರುವ ಬೆಳಗಾವಿಯ ವಿವಿಧ ಸ್ಥಳಗಳಲ್ಲಿ ಸಂಸ್ಥೆಯ ಅವತಾರ ಬುಕ್ಕಿಂಗ್ ಏಜೆಂಟ್‌ರಲ್ಲಿಯೂ ಮುಂಗಡ ಟಿಕೆಟ್ ಕಾಯ್ದಿರಿಸಿಕೊಳ್ಳಬಹುದು ಎಂದು ವಾ.ಕ.ರ.ಸಾ.ಸಂಸ್ಥೆಯ ಬೆಳಗಾವಿ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯುಗಾದಿ ಹಬ್ಬ: ವಿಶೇಷ ಬಸ್ ವ್ಯವಸ್ಥೆ

ಬೆಳಗಾವಿ  : ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಏಪ್ರಿಲ್ ೨ ಮತ್ತು ೩ ರಂದು ಬೆಂಗಳೂರಿನಿಂದ ಬೆಳಗಾವಿ ವಿಭಾಗದ ವ್ಯಾಪ್ತಿಯ ಸ್ಥಳಗಳಿಗೆ ಬರುವ ಪ್ರಯಾಣಿಕರಿಗೆ ಏಪ್ರಿಲ್೧ ರಂದು ಬೆಂಗಳೂರು ಕೆಂಪೇಗೌಡ ಬಸ್ ನಿಲ್ದಾಣದಿಂದ ಬೆಳಗಾವಿಗೆ ವಿವಿಧ ಮಾದರಿಯ ಒಟ್ಟು ೨೧ ಹೆಚ್ಚುವರಿ ವಿವಿಧ ವಿಶೇಷ ವಾಹನಗಳ ವ್ಯವಸ್ಥೆ ಮಾಡಲಾಗಿದೆ.
ಮರಳಿ ಬೆಳಗಾವಿಯಿಂದ ಬೆಂಗಳೂರು ಕೆಂಪೇಗೌಡ ಬಸ್ ನಿಲ್ದಾಣಕ್ಕೆ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಈ ಸಾರಿಗೆಗೆ ಇ- ಟಿಕೆಟ್‌ನ್ನು ಆನ್‌ಲೈನ್  http://www.ksrtc.in, www.nwkrtc.in ಹಾಗೂ ಮೊಬೈಲ್ ಮುಖಾಂತರವೂ ಪಡೆಯಬಹುದಾಗಿದೆ. ಸಂಸ್ಥೆಯಿಂದ ನಿಗದಿಪಡಿಸಿರುವ ಬೆಳಗಾವಿಯ ವಿವಿಧ ಸ್ಥಳಗಳಲ್ಲಿ ಸಂಸ್ಥೆಯ ಅವತಾರ ಬುಕ್ಕಿಂಗ್ ಏಜೆಂಟ್‌ರಲ್ಲಿಯೂ ಮುಂಗಡ ಟಿಕೆಟ್ ಕಾಯ್ದಿರಿಸಿಕೊಳ್ಳಬಹುದು ಎಂದು ವಾ.ಕ.ರ.ಸಾ.ಸಂಸ್ಥೆಯ ಬೆಳಗಾವಿ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಏಪ್ರಿಲ್ ೫ ರಂದು ಡಾ.ಬಾಬು ಜಗಜೀವನರಾಮ್ ರವರ ೧೧೫ ನೇ ಜನ್ಮ ದಿನಾಚರಣೆ

ಬೆಳಗಾವಿ  : ರಂದು ಹಸಿರು ಕ್ರಾಂತಿ ಹರಿಕಾರ ರಾ? ನಾಯಕ ಹಾಗೂ ಭಾರತದ ಮಾಜಿ ಉಪಪ್ರಧಾನಮಂತ್ರಿಯಾದ ಡಾ.ಬಾಬು ಜಗಜೀವನರಾಮ್ ರವರ ೧೧೫ ನೇ ಜನ್ಮ ದಿನಾಚರಣೆ ಮಂಗಳವಾರ(ಏಪ್ರಿಲ್ ೫) ರಂದು ನಡೆಯಲಿದೆ.
ಬೆಳಿಗ್ಗೆ ೯.೩೦ ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಿಂದ ಡಾ.ಬಾಬು ಜಗಜೀವನರಾಮ್ ಅವರ ಭಾವಚಿತ್ರದ ಭವ್ಯ ಮೆರವಣಿಗೆ ಹೊರಡುವುದು. ಬೆಳಿಗ್ಗೆ ೧೧ ಗೆ ಬೆಳಗಾವಿಯ ಸಂಗಮೇಶ್ವರ ನಗರ ಡಾ.ಬಾಬು ಜಗಜೀವನರಾಮ್ ಉದ್ಯಾನವನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯುವುದು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಜರಗುವ ಕಾರ್ಯಕ್ರಮವನ್ನು ಜಲಸಂಪನ್ಮೂಲ (ಭಾರಿ ಮತ್ತು ಮಧ್ಯಮ ನೀರಾವರಿ) ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಎಂ, ಕಾರಜೋಳ ಉದ್ಘಾಟಿಸುವರು.
ಅರಣ್ಯ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಉಮೇಶ ವಿ. ಕತ್ತಿ ಹಾಗೂ ಮುಜರಾಯಿ, ಹಜ್ ಹಾಗೂ ವಕ್ಫ್ ಸಚಿವರಾದ ಶಶಿಕಲಾ ಅ. ಜೊಲ್ಲೆ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಕಾರ್ಯಕ್ರಮದ ಅಧ್ತಕ್ಷತೆಯನ್ನು ಬೆಳಗಾವಿ ಉತ್ತರದ ಶಾಸಕರಾದ ಅನೀಲ ಎಸ್. ಬೆನಕೆ ಅವರು ವಹಿಸಲಿದ್ದು, ಕರ್ನಾಟಕ ವಿಧಾನಸಭೆಯ ಉಪ ಸಭಾಧ್ಯಕ್ಷರಾದ ವಿಶ್ವನಾಥ(ಆನಂದ) ಚ. ಮಾಮನಿ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಮಹೇಶ ಕುಮಠಳ್ಳಿ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ದುರ್ಯೋಧನ ಎಂ. ಐಹೊಳೆ ಹಾಗೂ ಕರ್ನಾಟಕ ತಾಂಡಾ ಅಭಿವೃದ್ಧಿ ನಿಮಗದ ಅಧ್ಯಕ್ಷರಾದ ಪಿ. ರಾಜೀವ ಅವರು ವಿಶೇ? ಆಮಂತ್ರಿತರಾಗಿ ಆಹ್ವಾನಿಸಲಿದ್ದಾರೆ.
ಲೋಕಸಭೆ, ರಾಜ್ಯಸಭೆ, ವಿಧಾನ ಸಭೆ, ವಿಧಾನ ಪರಿ?ತ್ತಿನ ಶಾಸಕರು ಮತ್ತು ಸಂಸದರು, ಕರ್ನಾಟಕ ಅಲ್ಪ ಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷರು, ಕಾಡಾ, ಮಲಪ್ರಭಾ ಮತ್ತು ಘಟಪ್ರಭಾ ಯೋಜನೆಗಳ ಅಧ್ಯಕ್ಷರು, ಬೆಳಗಾವಿ ನಗರಾಭಿವೃದ್ಧಿ ಪ್ರಧಿಕಾರದ ಅಧ್ಯಕ್ಷರು, ಬೆಳಗಾವಿ ವಿಭಾಗದ ಪ್ರದೇಶಿಕ ಆಯುಕ್ತರು ಹಾಗೂ ಉತ್ತರ ವಲಯದ ಆರಕ್ಷಕ ಮಹಾನಿರೀಕ್ಷಕರು ಗೌರವಾನ್ವಿತ ಅತಿಥಿಗಳಾಗಿ ಆಗಮಿಸುವರು.
ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ರಾಜ್ಯ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಪ್ರಕಾಶ ಎಸ್. ಕಟ್ಟೀಮನಿ ಅವರು ಡಾ.ಬಾಬು ಜಗಜೀವನರಾಮ್ ಅವರ ಬಗ್ಗೆ ಉಪನ್ಯಾಸ ನೀಡುವರು.
ಬೆಳಗಾವಿ ನಗರದ ಮಹಾನಗರ ಪಾಲಿಕೆಉ ಸದಸ್ಯರು ಮತ್ತು ಬೆಳಗಾವಿ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಹಾಗೂ ಗ್ರಾಮ ಪಂಚಾಯತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸ್ಥಾಯಿ ಸಮಿತಿ ಅಧ್ಯಕ್ಷರುಗಳು, ಸದಸ್ಯರುಗಳು ಹಾಗೂ ಚುನಾಯಿತ ಜನ ಪ್ರತಿನಿಧಿಗಳು, ಗಣ್ಯರು ಮತ್ತು ಸಮಸ್ತ ನಾಗರಿಕರು ಹಾಗೂ ಜಿಲ್ಲೆಯ ಎಲ್ಲಾ ಪರಿಶಿ? ಜಾತಿ, ಪರಿಶಿ? ಪಂಗಡದ ಸಂಘಟನೆಗಳ ಮುಖಂಡರುಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.
ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಬೆಳಗಾವಿ ನಗರ ಪೊಲೀಸ್ ಆಯುಕ್ತರಾದ ಡಾ.ಎಂ.ಬಿ.ಬೋರಲಿಂಗಯ್ಯ, ಜಿಲ್ಲಾ ಪೊಲೀಸ್ ವರಿ?ಧಿಕಾರಿಗಳಾದ ಲಕ್ಷ್ಮಣ ನಿಂಬರಗಿ, ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ದರ್ಶನ ಎಚ್.ವಿ, ಮಹಾನಗರ ಪಾಲಿಕೆಯ ಆಯುಕ್ತರಾದ ರುದ್ರೇಶ ಗಾಳು ಮತ್ತು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಡಾ. ಉಮಾ ಸಾಲಿಗೌಡರ ಅವರು ಸರ್ವರಿಗೂ ಸ್ವಾಗತ ಕೋರುವರು.

ಯುಗಾದಿ ಹಬ್ಬವನ್ನು “ರಾಜ್ಯ ಧಾರ್ಮಿಕ ದಿನ” ವನ್ನಾಗಿ ಆಚರಿಸಲು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಸೂಚನೆ

ಬೆಳಗಾವಿ  : ಏಪ್ರಿಲ್ ೦೨ ರ ಪ್ರಸಕ್ತ ಸಾಲಿನ ಯುಗಾದಿ ಹಬ್ಬವನ್ನು ಇನ್ನು ಮುಂದೆ “ಧಾರ್ಮಿಕ ದಿನ” ವನ್ನಾಗಿ ಆಚರಿಸು ಬಗ್ಗೆ ಕರ್ನಾಟಕ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಯಿಂದ ಹೊರಡಿಸಲಾದ ಸುತ್ತೋಲೆಯನ್ವಯ ಬೆಳಗಾವಿ ಜಿಲ್ಲೆಯ ಎಲ್ಲಾ ದೇವಾಲಯಗಳಲ್ಲಿ ಹೆಚ್ಚಿನ ಭಕ್ತರೊಂದಿಗೆ,ವಿಶೇ? ಪೂಜೆ ಮತ್ತು ಪ್ರಾರ್ಥನೆಗಳು, ಭಜನೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆಯೊಂದಿಗೆ ರಾಜ್ಯ ಧಾರ್ಮಿಕ ದಿನಾಚರಣೆಯನ್ನು ಆಚರಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ಬೆಳಾಗಾವಿ ಜಿಲ್ಲೆಯ ನಿಪ್ಪಾಣಿ ತಾಲ್ಲೂಕಿನ ಶ್ರೀ ವಿರುಪಾಕ್ಷಲಿಂಗ ಸಮಾಧಿ ಮಠದಲ್ಲಿ ಪ.ಪೂ.ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳು ಹಾಗೂ ಕೊಲ್ಲಾಪುರ ಕನ್ಹೇರಿ ಸಿದ್ದಗಿರಿ ಮಠದ ಪ.ಪೂ.ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಮಹಾಸ್ವಾಮಿಗಳು ದಿವ್ಯ ಸಾನಿದ್ಯದಲ್ಲಿ ಧಾರ್ಮಿಯ ದಿನಾಚರಣೆ ಜರುಗಲಿದೆ.
ಮುಜರಾಯಿ, ಹಜ್, ವಕ್ಫ ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಶಶಿಕಲಾ ಅ. ಜೊಲ್ಲೆ ಮತ್ತು ಚಿಕ್ಕೋಡಿ ಲೋಕಸಭಾ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ ಹಾಗೂ ಸ್ಥಳೀಯ ಜನಪ್ರತಿನಿದಿಗಳ ನೇತೃತ್ವದಲ್ಲಿ ಏಪ್ರಿಲ್ ೨ ರಂದು ಬೆಳಿಗ್ಗೆ ೬ ಗಂಟೆಯಿಂದ ೯ ಗಂಟೆವರೆಗೆ ಯುಗಾದಿ ಹಬ್ಬದ ನಿಮಿತ್ಯ ವಿವಿಧ ವಿನೂತನ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ-2021 ಪ್ರಕಟ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button