ಪ್ರಗತಿವಾಹಿನಿ ಸುದ್ದಿ, ಕಾರವಾರ : ನೆಹರು ಯುವ ಕೇಂದ್ರದ ವತಿಯಿಂದ ೨೦೨೦-೨೧ ನೇ ಸಾಲಿನ ಜಿಲ್ಲಾ ಮಟ್ಟದ ಯುವ ಮಂಡಳ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲಾ ಮಟ್ಟದ ಯುವ ಮಂಡಳಿ ಪ್ರಶಸ್ತಿ ವಿಜೇತ ಮಂಡಳಿಗೆ ೨೫ ಸಾವಿರ ರೂ ನೀಡಲಾಗುವುದು. ಆಸಕ್ತರು ಅ.೩೧ರೊಳಗಾಗಿ ಅರ್ಜಿ ಸಲ್ಲಿಸಬೇಕಾಗಿದ್ದು, ಯುವ ಮಂಡಳಗಳು ಕರ್ನಾಟಕ ಸಂಘ ಸಂಸ್ಥೆಗಳ ಕಾಯ್ದೆ ೧೯೬೦ ರ ಆಡಿಯಲ್ಲಿ ನೋಂದಣಿಯಾಗಿರಬೇಕು ಹಾಗೂ ಎಪ್ರೀಲ್ ೨೦೨೦ ರಿಂದ ಮಾರ್ಚ್ ೨೦೨೧ ರ ಅವಧಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಪರಿಸರ ಸೌರಕ್ಷಣೆ, ವೃತ್ತಿ ತರಬೇತಿ, ಸಾಕ್ಷರತೆ, ಮಹಿಳಾ ಸಬಲೀಕರಣ ಸಾಂಸ್ಕೃತಿಕ ಕಾರ್ಯಕ್ರಮ, ಸ್ವಯಂ ಉದ್ಯೋಗ, ಸಾಮಾಜಿಕ ಪಿಡುಗುಗಳು, ಕ್ರೀಡೆ ಹಾಗೂ ಸಮಾಜಿಕ ಕಾರ್ಯ ಮಾಡಿರಬೇಕು. ಅವುಗಳ ಕುರಿತು ಸಂಬಂಧಿಸಿದ ದಾಖಲೆಗಳನ್ನು ಹೊಂದಿರಬೇಕು.
ಜಿಲ್ಲೆಯ ಆಸಕ್ತ ಯುವಕ/ತಿ ಮಹಿಳಾ ಮಂಡಳಿಗಳು ಜಿಲ್ಲಾ ಯುವ ಅಧಿಕಾರಿ, ನೆಹರು ಯುವ ಕೇಂದ್ರ, ಜಿಲ್ಲಾಧಿಕಾರಿಗಳ ಕಛೇರಿಯ ಮೊದಲನ ಮಹಡಿ, ಕಾರವಾರ ಇವರನ್ನು ಸಂಪರ್ಕಿಸಿ ನಿಗದಿತ ಅರ್ಜಿ ನಮೂನೆಗಳನ್ನು ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: ೧೯೪೪೯೯೯೨೧೯೫, ೦೮೩೮೨೨೨೬೯೬೫ ಜಿಲ್ಲಾ ನೆಹರು ಯುವ ಕೇಂದ್ರ ಕಾರವಾರ, ಸಂಪರ್ಕಿಸಬಹುದೆಂದು ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಯಶವಂತ ಯಾದವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಸ್ಮಾರ್ಟ್ ಫೋನ್ ಗಳಲ್ಲಿ ಬಂದ್ ಆಗಲಿದೆ ವಾಟ್ಸಪ್…!
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ