Kannada NewsKarnataka News

ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ :  ಕರ್ನಾಟಕ ಮಾಧ್ಯಮ ಅಕಾಡೆಮಿಯ 2021-22ನೇ ಸಾಲಿನ ಮಹಿಳಾ ಉದ್ದೇಶಿತ ಆಯವ್ಯಯ ಯೋಜನೆಯಡಿಯಲ್ಲಿ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿರುವ ಮಹಿಳಾ ಅಭ್ಯರ್ಥಿಗಳಿಗೆ ಎರಡು ತಿಂಗಳ ವೃತ್ತಿ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.

 ಮಹಿಳಾ ಉದ್ದೇಶಿತ ಆಯವ್ಯಯ ಯೋಜನೆಯಡಿಯಲ್ಲಿ 15 ಮಂದಿ ಮಹಿಳಾ ಅಭ್ಯರ್ಥಿಗಳನ್ನು ಗರಿಷ್ಠ ಅಂಕಗಳ ಆಧಾರದ ಮೇಲೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಪತ್ರಿಕಾಲಯಗಳಲ್ಲಿ ತರಬೇತಿ ನೀಡಿ ಮಾಹೆಯಾನ ರೂ. 15,000/- ಗಳ ಸ್ಟೈಫಂಡ್ ನೀಡಲಾಗುವುದು.
 ಮಹಿಳಾ ಅಭ್ಯರ್ಥಿಯು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿದ್ದು ಕನ್ನಡ ಭಾಷೆಯಲ್ಲಿ ಪರಿಣಿತರಾಗಿರಬೇಕು.
 ಅರ್ಜಿಯೊಂದಿಗೆ ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಪದವಿ ಹಾಗೂ ಸ್ನಾತಕೋತ್ತರ ಪ್ರಮಾಣ ಪತ್ರಗಳೊಂದಿಗೆ ಪಾಸ್‍ಪೋರ್ಟ್ ಅಳತೆಯ ಭಾವಚಿತ್ರ ಹಾಗೂ ಇನ್ನಿತರೆ ಪೂರಕ ದಾಖಲೆಗಳನ್ನು (PDF) ಸ್ಕ್ಯಾನ್ ಮಾಡಿ ಇ-ಮೇಲ್ ವಿಳಾಸ [email protected] ಮೂಲಕ ಅಥವಾ ಅಂಚೆ ಮೂಲಕ ದಿನಾಂಕ : 29-01-2022 ರ ಒಳಗೆ ತಲುಪುವಂತೆ ಕಳುಹಿಸಬೇಕು. ನಂತರ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
 ಈ ಹಿಂದೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಮಾಧ್ಯಮ ಅಕಾಡೆಮಿ ಸೇರಿದಂತೆ ಯಾವುದೇ ಸರ್ಕಾರಿ ಇಲಾಖೆ/ಸಂಸ್ಥೆಗಳಲ್ಲಿ ಫಲಾನುಭವಿಗಳಾಗಿದ್ದರೆ ಅಂತಹವರು ಅರ್ಜಿ ಸಲ್ಲಿಸುವಂತಿಲ್ಲ. ಸರ್ಕಾರದಿಂದ ಈಗಾಗಲೇ ಸೌಲಭ್ಯ ಪಡೆದ ಅಭ್ಯರ್ಥಿಗಳು ಸುಳ್ಳು ಮಾಹಿತಿ ನೀಡಿ ಅರ್ಜಿ ಸಲ್ಲಿಸಿದಲ್ಲಿ ಅವರ ಅರ್ಜಿಯನ್ನು ತಿರಸ್ಕರಿಸಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದೊಮ್ಮೆ ಹೂಡಲಾಗುವುದು.
 ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 080-22860164 ಕಾರ್ಯದರ್ಶಿಗಳು, ಕರ್ನಾಟಕ ಮಾಧ್ಯಮ ಅಕಾಡೆಮಿ, ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಕೇಂದ್ರ, ಡಾ. ಅಂಬೇಡ್ಕರ್ ವೀಧಿ, ಬೆಂಗಳೂರು-560001 ಸಂಪರ್ಕಿಸಬಹುದಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button