ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗೆ ಅರ್ಜಿ ಅಹ್ವಾನ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ದೀನ್‌ದಯಾಳ ಅಂತ್ಯೋದಯ ಯೋಜನೆ, ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ (ಡೇ-ನಲ್ಮ್) ಯೋಜನೆಯಡಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗಳನ್ನು ಗೌರವಧನ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ನೇಮಕಾತಿ ಮಾಡಿಕೊಳ್ಳಲು ಪುರಸಭೆಯಲ್ಲಿ ನೊಂದಾಯಿತ ಅರ್ಹ ಸ್ವ-ಸಹಾಯ ಸಂಘಗಳ ಸದಸ್ಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಒಟ್ಟು ೦೨ ಹುದ್ದೆಗಳು ಖಾಲಿ ಇದ್ದು, ಗೌರವಧನ ಮಾಸಿಕ ೮೦೦೦ ರೂ.ಗಳು ಹಾಗೂ ಪ್ರಯಾಣ ಭತ್ತೆ ಗರಿಷ್ಠ ೨೦೦೦ ರೂ.ಗಳನ್ನು ನೀಡಲಾಗುದು.
ಅರ್ಜಿ ಹಾಕಲು ಹೊಂದಿರಬೇಕಾದ ಅರ್ಹತೆಗಳು : ೧೮ ರಿಂದ ೪೫ ವಯೋಮಿತಿ ಹೊಂದಿರಬೇಕು. ಕನಿಷ್ಠ ದ್ವಿತೀಯ ಪಿಯುಸಿ ತೇರ್ಗಡೆಯಾಗಿರಬೇಕು. ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿರಬೇಕು. (ಪ್ರಮಾಣ ಪತ್ರ ಹೊಂದಿರಬೇಕು). ಹುಕ್ಕೇರಿ ಪುರಸಭೆ ವ್ಯಾಪ್ತಿಯ ಖಾಯಂ ನಿವಾಸಿಯಾಗಿದ್ದು, ಸ್ವ-ಸಹಾಯ ಸಂಘದಲ್ಲಿ ಕನಿಷ್ಠ ೦೩ ವರ್ಷದಿಂದ ಸದಸ್ಯರಾಗಿರಬೇಕು. ಬ್ಯಾಂಕ್‌ಗಳಿಂದ ಸಾಲ ಪಡೆದು ಕಟಬಾಕಿದಾರರಾಗಿರಬಾರದು. ಸರ್ಕಾರಿ ಅಥವಾ ಅರೆಸರ್ಕಾರಿ ಅಥವಾ ಎನ್.ಜಿ.ಓಗಳಲ್ಲಿ ಉದ್ಯೋಗಸ್ತರಾಗಿರಬಾರದು. ಉತ್ತಮ ಸಂವಹನ ಕೌಶಲ್ಯದ ಜೊತೆಗೆ ಸಮುದಾಯ ಚಟುವಟಿಕೆ ತರಬೇತಿಗಳಲ್ಲಿ ಪಾಲ್ಗೋಳ್ಳುವ ಇಚ್ಚಾಶಕ್ತಿ ಹೊಂದಿರಬೇಕು. ಕಾರ್ಯನಿಮಿತ್ಯ ಅಗತ್ಯವಿದ್ದಲ್ಲಿ ಹೊರ ಸಂಚಾರಕ್ಕೆ ಸಿದ್ದರಿರಬೇಕು. ಕಡ್ಡಾಯವಾಗಿ ಮಹಿಳೆಯರಿಗೆ ಮಾತ್ರ ಅವಕಾಶವಿರುತ್ತದೆ.
ಅರ್ಹ ಅಭ್ಯರ್ಥಿಗಳನ್ನು ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯಿಂದ ಆಯ್ಕೆ ಮಾಡಲಾಗುವುದು. ಸಮಿತಿಯ ನಿರ್ಣಯವೇ ಅಂತಿಮವಾದದ್ದು, ಆಸಕ್ತ ಅಭ್ಯರ್ಥಿಗಳು ಪುರಸಭೆಯ ಕಚೇರಿ ಅವಧಿಯಲ್ಲಿ ಸಮುದಾಯ ಸಂಘಟನಾಧಿಕಾರಿ ಅವರನ್ನು ಸಂಪರ್ಕಿಸಿ ಜನವರಿ ೨೬ ರಂದು ಸಂಜೆ ೫ ಗಂಟೆ ೩೦ ನಿಮಿಷದ ಒಳಗಾಗಿ ಅರ್ಜಿಯನ್ನು ದ್ವಿ ಪ್ರತಿಯಲ್ಲಿ ಹುಕ್ಕೇರಿ ಪುರಸಭೆಯ ಕಾರ್ಯಾಲಯಕ್ಕೆ ಸಲ್ಲಿಸಬೇಕು. ಅವಧಿ ಮೀರಿ ಬಂದ ಅರ್ಜಿಗಳನ್ನು ಪರಿಗಣ ಸಲಾಗುವುದಿಲ್ಲ ಎಂದು ಹುಕ್ಕೇರಿ ಪುರಸಭೆಯ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಜನವರಿ ೨೭ ರ ವರೆಗೆ ವಿಸ್ತರಿಸಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ.
೨೦೨೧-೨೨ ನೇ ಸಾಲಿನ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಸತಿ ನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ.೧, ೨ಎ, ೨ಬಿ, ೩ಎ, ೩ಬಿ, ಪ್ರ.ಜಾ/ಪ್ರ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದ ದಿನಾಂಕವನ್ನು ವಿಸ್ತರಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಜನವರಿ ೨೭ ರ ವರೆಗೆ ವಿಸ್ತರಿಸಲಾಗಿದೆ. ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲಾತಿ ಹಾಗೂ ಸರ್ಕಾರದ ಆದೇಶ ಮತ್ತು ಅರ್ಜಿಯನ್ನು ಇಲಾಖೆಯ ವೆಬ್ ಸೈಟ್ ನಲ್ಲಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ ೦೮೦-೮೦೫೦೩೭೦೦೦೬ ಮುಖಾಂತರ ಹಾಗೂ ಜಿಲ್ಲಾ/ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲಾಗಳೊಂದಿಗೆ ಸಂಪರ್ಕಿಸಬಹುದು ಎಂದು ಬೆಳಗಾವಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗ್ರಾಪಂ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ
ಬೆಳಗಾವಿ ಜಿಲ್ಲೆಯಲ್ಲಿ ಕಾರಣಾಂತರಗಳಿಂದ ಖಾಲಿಯಾದ ಗ್ರಾಮ ಪಂಚಾಯತ ಗ್ರಂಥಾಲಯಗಳಿಗೆ ಗ್ರಂಥಾಲಯ ಮೇಲ್ವಿಚಾರಕರನ್ನು ಗೌರವ ಸಂಭಾವನೆಯ ಆಧಾರದ ಮೇಲೆ ನೇಮಕಾತಿಗಾಗಿ ನಿಗದಿಪಡಿಸಿದ ಮೀಸಲಾತಿಗೆ ಅನುಗುಣವಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಗ್ರಾಮ ಮತ್ತು ಮೀಸಲಾತಿ: ಅಂಕಲಿ( ಚಿಕ್ಕೋಡಿ) – ಪರಿಶಿಷ್ಟ ಜಾತಿ ಅಭ್ಯರ್ಥಿ, ಗ್ರಾಮೀಣ ಅಭ್ಯರ್ಥಿ, ಹಲಗಾ ಮತ್ತು ಸುಳೇಭಾವಿ (ಬೆಳಗಾವಿ) – ಸಾಮಾನ್ಯ ಅಭ್ಯರ್ಥಿ, ಯೋಜನಾ ಅಭ್ಯರ್ಥಿ ಮತ್ತು ಪರಿಶಿಷ್ಟ ಜಾತಿ ಅಭ್ಯರ್ಥಿ, ಹಲ್ಯಾಳ, ನಾಗನೂರ.ಪಿ.ಕೆ., ಹೊಸವಂಟಮೂರಿ (ಬೆಳಗಾವಿ)- ಪರಿಶಿಷ್ಟ ಜಾತಿ ಅಭ್ಯರ್ಥಿ, ಸಪ್ತಸಾಗರ ಮತ್ತು ಮಂಗಸೂಳಿ (ಅಥಣಿ ) – ೨ ಬಿ, ಮಹಿಳಾ ಅಭ್ಯರ್ಥಿ, ಸಾಮಾನ್ಯ ಅಭ್ಯರ್ಥಿ, ಪರಿಶಿಷ್ಟ ಪಂಗಡ ಅಭ್ಯರ್ಥಿ, ಮಹಿಳಾ ಅಭ್ಯರ್ಥಿ ಮತ್ತು ಸಾಮಾನ್ಯ ಅಭ್ಯರ್ಥಿ, ಮಾಜಿ ಸೈನಿಕ ಅಭ್ಯರ್ಥಿ , ಹೆಬ್ಬಾಳ ಮತ್ತು ಹೊಸೂರ(ಹುಕ್ಕೇರಿ) – ಸಾಮಾನ್ಯ ಅಭ್ಯರ್ಥಿ, ಮಹಿಳಾ ಅಭ್ಯರ್ಥಿ, ೨ ಎ, ಗ್ರಾಮೀಣ ಅಭ್ಯರ್ಥಿ, ಅಂಗವಿಕಲ ಅಭ್ಯರ್ಥಿ, ಕರಂಬಳ(ಖಾನಾಪೂರ) – ಪರಿಶಿಷ್ಟ ಜಾತಿ ಅಭ್ಯರ್ಥಿ, ಮಹಿಳಾ ಅಭ್ಯರ್ಥಿ, ಚುಳಕಿ( ಸವದತ್ತಿ) – ಪರಿಶಿಷ್ಟ ಜಾತಿ ಅಭ್ಯರ್ಥಿ, ಅಂಗವಿಕಲ ಅಭ್ಯರ್ಥಿ.
ಷರತ್ತುಗಳು : ಅಭ್ಯರ್ಥಿಯು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಂಕ ಹಾಗೂ ಶೇಕಡಾವಾರು ಅಂಕಗಳನ್ನು ಕಡ್ಡಾಯವಾಗಿ ನಮೂದಿಸಬೇಕು. ಸ್ಥಳೀಯ ಗ್ರಾಮ ಪಂಚಾಯತ ವ್ಯಾಪ್ತಿಗೆ ಸೇರಿರಬೇಕು. ಕಡ್ಡಾಯವಾಗಿ ತಹಶೀಲ್ದಾರರವರಿಂದ ಪಡೆದ ರಹವಾಸಿ ಪ್ರಮಾಣ ಪತ್ರ ಲಗತ್ತಿಸಿರಬೇಕು. ನಿಗದಿಪಡಿಸಿದ ಮೀಸಲಾತಿಗೆ ಒಳಪಡುವ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸತಕ್ಕದ್ದು. ಮುಂದುವರಿಕೆ ಶಿಕ್ಷಣದ ಅಡಿಯಲ್ಲಿ ಪ್ರೇರಕ/ಉಪ ಪ್ರೇರಕರು ಮತ್ತು ಸಂಯೋಜಕರೆಂದು ಸೇವೆ ಸಲ್ಲಿಸಿದ್ದಲ್ಲಿ ಅಂತಹವರಿಗೆ ಪ್ರಾಧಾನ್ಯತೆ ನೀಡಲಾಗುವುದು (ಜಿಲ್ಲಾ &ತಾಲೂಕಾ ಸಂಯೋಜಕರಿಂದ ಪಡೆದ ಪ್ರಮಾಣ ಪತ್ರಗಳನ್ನು ಮಾತ್ರ ಪರಿಗಣ ಸಲಾಗುವುದು). ಜಿಲ್ಲಾ ಪಂಚಾಯತ್ ಅಂತರ್ಜಾಲದ ಮೂಲಕ ಅರ್ಜಿಗಳನ್ನು ಫೆಬ್ರವರಿ ೧೯ (ಸಂಜೆ ೫.೩೦ಗಂಟೆ) ಒಳಗಾಗಿ ನಿಗದಿಪಡಿಸಿದ ದಾಖಲಾತಿಗಳೊಂದಿಗೆ ಅರ್ಜಿಯನ್ನು ಸಲ್ಲಿಸತಕ್ಕದ್ದು. ಅಭ್ಯರ್ಥಿಗಳು ೧೮ ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು ಮತ್ತು ಸಾಮಾನ್ಯ ವರ್ಗ ೩೬ ವರ್ಷಗಳು, ೨ಎ, ೨ಬಿ, ೩ಎ, ೩ಬಿ ೩೮ ವರ್ಷಗಳು, ಪ.ಜಾ/ಪ.ಪಂ.ಪ್ರ-೧ ೪೦ ವರ್ಷಗಳು ಗರಿಷ್ಠ ವಯೋಮಿತಿ ಹೊಂದಿರಬೇಕು. ಅರ್ಜಿ ನಮೂನೆ ಹಾಗೂ ಅಧಿಸೂಚನೆ ಅಂತರ್ಜಾಲದಲ್ಲಿ ಲಭ್ಯವಿರುತ್ತದೆ. ಹಾಗೂ ಅರ್ಜಿಗಳನ್ನು ಸಲ್ಲಿಸಲು ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಜಿಲ್ಲಾ ಕೇಂದ್ರ ಗ್ರಂಥಾಲಯ, ಬೆಳಗಾವಿ(ದೂರವಾಣ ಸಂಖ್ಯೆ: (೦೮೩೧)೨೪೨೪೨೩೧) ಸಂಪರ್ಕಿಸಿಬಹುದು. ಈ ಮೇಲ್ವಿಚಾರಕರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.೧೨,೦೦೦/-ರಂತೆ ಗೌರವ ಸಂಭಾವನೆ ಇರುತ್ತದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೀದಿಬದಿ ವ್ಯಾಪಾರಿಗಳಿಗೆ ಕಿರುಸಾಲ
ಕೋವಿಡ್-೧೯ ಲಾಕ್ ಡೌನ್ ಅವದಿಯಲ್ಲಿ ತೊಂದರೆಗೊಳಗಾದ ಬೀದಿಬದಿ ವ್ಯಾಪಾರಿಗಳು ಆರ್ಥಿಕ ಸಬಲೀಕರಣಕ್ಕಾಗಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಮಂತ್ರಾಲಯ ಭಾರತ ಸರ್ಕಾರ ನವದೆಹಲಿ ರವರು ಬೀದಿ ವ್ಯಾಪಾರಿಗಳ ಅಭೀವೃದ್ದಿಗಾಗಿ ವಿಶೇಷ ಕಿರುಸಾಲ ಸೌಲಭ್ಯ ಯೋಜನೆ ಜಾರಿಗೆ ತಂದಿದ್ದು, ಬೀದಿ ವ್ಯಾಪರಸ್ಥರ ಕೈಗೆಟಕುವ ದರದಲ್ಲಿ ೧೦ ಸಾವಿರ ರೂ. ವರೆಗೆ ಕಿರುಸಾಲ ವ್ಯಾಪರಸ್ಥರಿಗೆ ನೀಡಲಾಗುವುದು.
ಈ ಯೋಜನೆ ಮಾರ್ಚ ೩೧ರ ವರೆಗೆ ಅನುಷ್ಥಾನಗೊಳ್ಳಲಿದ್ದು, ಅರ್ಹ ಬೀದಿಬದಿ ವ್ಯಾಪರಸ್ಥರು ಮಾರ್ಚ ೨೦೨೨ ರೊಳಗಾಗಿ ಇನ್ನೂ ಹೆಚ್ಚಿನ ಸಂಖೆಯಲ್ಲಿ ಇದರ ಉಪಯೋಗ ಪಡೆದುಕೊಳ್ಳಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮಹಾನಗರ ಪಾಲಿಕೆ ಬೆಳಗಾವಿ ಡೇ-ನಲ್ಮ್ ವಿಭಾಗ ಪಿ.ಎಂ.ಸ್ವನಿಧಿ ಕಚೇರಿಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರೇಯಸಿಯ ತಾಯಿಗೆ ಕಿಡ್ನಿ ಕೊಟ್ಟ, ಬೇರೊಬ್ಬನನ್ನು ಮದುವೆಯಾದಳು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ