*ಬ್ಯೂಟಿ ಪಾರ್ಲರ್ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರುಡ್ ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಬ್ಯೂಟಿ ಪಾರ್ಲರ್ ಕುರಿತ 30 ದಿನಗಳ ಉಚಿತ ತರಬೇತಿಗಾಗಿ ಗ್ರಾಮೀಣ ಭಾಗದ ಆಸಕ್ತ ನಿರುದ್ಯೋಗಿ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.
ಆಸಕ್ತರು ಅಕ್ಟೋಬರ್ 18 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕು ಅರಿಶಿನಕುಂಟೆಯ ರುಡ್ ಸೆಟ್ ಸಂಸ್ಥೆ ದೂರವಾಣಿ: 9380162042, 9740982585, 9113880324 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ