VTU Add
Beereshwara 36
LaxmiTai 5

ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ, ಶ್ರೇಷ್ಠ ಕೃಷಿ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ

Anvekar 3


ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಕೃಷಿ ವಿಶ್ವವಿದ್ಯಾಲಯ, ಧಾರವಾಡದ ವತಿಯಿಂದ ಕೃಷಿಯಲ್ಲಿ ವಿಶೇಷ ಸಾಧನೆ ಮಾಡಿದ ರೈತರನ್ನು ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ಪ್ರತಿ ಜಿಲ್ಲೆಗೆ ಒಬ್ಬರಂತೆ ಅತ್ಯುತ್ತಮ ರೈತ ಹಾಗೂ ರೈತ ಮಹಿಳೆಯನ್ನು ಗುರುತಿಸಿ ಸೆಪ್ಟೆಂಬರ್ ನಲ್ಲಿ ಜರುಗುವ ೨೦೨೩ ರ ಕೃಷಿಮೇಳದಲ್ಲಿ ಶ್ರೇಷ್ಠ ಕೃಷಿಕ ಹಾಗೂ ಶ್ರೇಷ್ಠ ಕೃಷಿ ಮಹಿಳೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ಬೆಳಗಾವಿ ಜಿಲ್ಲೆಯ ಆಸಕ್ತ ರೈತ ಹಾಗೂ ರೈತ ಮಹಿಳೆಯರು ನಿಗದಿತ ಅರ್ಜಿ ನಮೂನೆಯನ್ನು ಕೃಷಿ ವಿಸ್ತರಣಾ ಮುಂದಾಳು, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಸಂಕೇಶ್ವರ ೫೯೧ ೩೧೪ ಜಿ. ಬೆಳಗಾವಿ ತಾ. ಹುಕ್ಕೇರಿ ಕಛೇರಿಯಿಂದ ಜು.೭ ೨೦೨೩ ರಿಂದ ಜು.೨೮ ೨೦೨೩ ರ ವರೆಗೆ ಕಛೇರಿ ವೇಳೆ ಸೋಮವಾರ ದಿಂದ ಶುಕ್ರವಾರ ಬೆಳಗ್ಗೆ ೯ ರಿಂದ ಸಾಯಂಕಾಲ ೫ ಘಂಟೆ ಹಾಗೂ ಶನಿವಾರ ಬೆಳಿಗ್ಗೆ ೯ ರಿಂದ ಮಧ್ಯಾಹ್ನ ೧ ಗಂಟೆಯ ಒಳಗಾಗಿ ಪಡೆಯಬಹುದಾಗಿದೆ.
ಭರ್ತಿ ಮಾಡಿದ ಅರ್ಜಿಯನ್ನು ಉತಾರದೊಂದಿಗೆ ತಾಲೂಕು ಮಟ್ಟದ ಕೃಷಿ ಅಧಿಕಾರಿಗಳ ತೋಟಗಾರಿಕೆ ಅಧಿಕಾರಿಗಳ ಶಿಫಾರಸ್ಸಿನೊಂದಿಗೆ ಜು.೩೧ ೨೦೨೩ ರ ಒಳಗಾಗಿ ಕಛೇರಿಯ ವೇಳೆಯಲ್ಲಿ ಸಂಕೇಶ್ವರ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದಲ್ಲಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಂಕೇಶ್ವರ ಕೃಷಿ ವಿಸ್ತರಣಾ ಮುಂದಾಳು, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ (ಮೋಬೈಲ್ ಸಂಖ್ಯೆ ೯೪೪೮೮೭೪೦೯೭/ ೮೨೭೭೨೦೮೧೯೯ ಗೆ ಸಂರ್ಪಕಿಸಿ ಮಾಹಿತಿ ಪಡೆಯಬಹುದು ಎಂದು ಸಂಕೇಶ್ವರ ಕೃಷಿ ವಿಸ್ತರಣಾ ಮುಂದಾಳು, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Emergency Service
Bottom Add3
Bottom Ad 2