ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಪ್ರಸ್ತಕ ಸಾಲಿನ ಯುವ ಸಬಲೀರಣ ಮತ್ತು ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಕ್ರೀಡಾಪಟುಗಳಿಗೆ ಏಕಲವ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವಅಂತಿಮ ದಿನಾಂಕದಿಂದ ಕಳೆದ ೫ ವರ್ಷಗಳ ಕ್ರೀಡಾ ಸಾಧನೆಗಳನ್ನು ಪರಿಗಣಿಸಲಾಗುವುದು. ಭಾರತದಯುವ ವ್ಯವಹಾರ ಮತ್ತು ಕ್ರೀಡಾ ಮಂತ್ರಾಲಯದಿಂದ ಮಾನ್ಯತೆ ಪಡೆದ ಕ್ರೀಡಾ ಸಂಘ ಸಂಸ್ಥೆಗಳು ಆಯೋಜಿಸಿರುವ ಕ್ರೀಡಾಕೂಟಗಳು ಹಾಗೂ ಅದೇ ಸಂಸ್ಥೆಗಳು ನೀಡುವ ಪ್ರಮಾಣ ಪತ್ರ/ಅರ್ಹತಾ ಪ್ರಮಾಣ ಪತ್ರ ನೀಡಿದ್ದಲ್ಲಿ ಅವುಗಳನ್ನು ಮಾತ್ರ ಪರಿಗಣಿಸಲಾಗುವುದು. ಕರ್ನಾಟಕದ ನಿವಾಸಿಯಾಗಿದ್ದು, ಅಂತರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾರತವನ್ನು ಪ್ರತಿನಿಧಿಸಿದ ಕ್ರೀಡಾಪಟುಗಳು ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು. ಇಂತಹ ಸಂದರ್ಭದಲ್ಲಿ ಕನಿಷ್ಠ ಒಂದು ವರ್ಷ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿರಲೇಬೇಕು ಹಾಗೂ ಅಂತರರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸಿದ್ದಲ್ಲಿ ವಿದೇಶ ಪ್ರಯಾಣರಹದಾರಿ ಪತ್ರ (Pಚಿssಠಿoಡಿಣ ಅoಠಿಥಿ) ಪ್ರತಿಯನ್ನು ಕಡ್ಡಾಯವಾಗಿ ಸಲ್ಲಿಸತಕ್ಕದ್ದು.
ಭಾರತದ ಪ್ರಜೆಯಾಗಿದ್ದು ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ೫ ವರ್ಷ ಕರ್ನಾಟಕವನ್ನು ಪ್ರತಿನಿಧಿಸಿರಬೇಕು ಮತ್ತು ಕರ್ನಾಟಕದ ನಿವಾಸಿಯಾಗಿರುವ ಬಗ್ಗೆ ದೃಢೀಕರಣ ಪತ್ರವನ್ನು ಅರ್ಜಿಯೊಂದಿಗೆ ಸಲ್ಲಿಸುವುದು. ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಕರ್ನಾಟಕದಿಂದ ಯಾವುದೇ ಕ್ರೀಡಾ ತಂಡ ಅಥವಾ ರಾಜ್ಯ ಕ್ರೀಡಾ ಸಂಸ್ಥೆಗಳು ಇಲ್ಲದಿದ್ದಲ್ಲಿ ಒಂದು ವರ್ಷರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿರಬೇಕು ಎಂಬ ಷರತ್ತು ಅನ್ವಯಿಸುವುದಿಲ್ಲ. ಆದರೆ ಕರ್ನಾಟಕದ ನಿವಾಸಿಯಾಗಿರುವ ಬಗ್ಗೆ ದೃಢೀಕರಣ ಪತ್ರವನ್ನು ಅರ್ಜಿಯೊಂದಿಗೆ ಸಲ್ಲಿಸುವುದು. ಕ್ರಿಮಿನಲ್ ಹಿನ್ನೆಲೆಇಲ್ಲ ಎಂಬ ಬಗ್ಗೆ ಪೊಲೀಸ್ ಪರಿಶೀಲಿನಾ ಪತ್ರಕಡ್ಡಾಯವಾಗಿ ಸಲ್ಲಿಸುವುದು.
ಅರ್ಹ ಕ್ರೀಡಾಪಟುಗಳು ಸೆ.೧೦ ರೊಳಗಾಗಿ ಅರ್ಜಿ ಸಲ್ಲಿಸಬಹುದು.ಹೆಚ್ಚಿನ ಮಾಹಿತಿಗಾಗಿ ದೂರವಾಣಿ ೦೮೩೧-೨೯೫೦೩೦೬ ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಬೆಳಗಾವಿ ಯುವ ಸಬಲೀಕರಣ ಮರ‍್ತು ಕ್ರೀಡಾ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ೨೦೨೪-೨೫ ನೆ ಸಾಲಿನ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಗಾಗಿ ಕ್ರೀಡಾಪಟುಗಳ ಪೋಷಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್.೧೦ ರೊಳಗಾಗಿ ಅರ್ಜಿಯನ್ನು ಭರ್ತಿ ಮಾಡಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಚೇರಿಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಚೇರಿಯ ದೂರವಾಣಿ:೦೮೩೧-೨೯೫೦೩೦೬ ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ