Belagavi NewsBelgaum NewsKannada NewsKarnataka News

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಬೆಳಗಾವಿ ಗ್ರಾಮೀಣ ವ್ಯಾಪ್ತಿ


ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ಗ್ರಾಮೀಣ ವ್ಯಾಪ್ತಿಯಲ್ಲಿ ಖಾಲಿ ಇರುವ ೭ ಅಂಗನವಾಡಿ ಕಾರ್ಯಕರ್ತೆ ಹಾಗೂ ೨೬ ಸಹಾಯಕಿಯರ ಹುದ್ದೆಗಳ ಆಯ್ಕೆಗಾಗಿ ಅರ್ಹ ಮಹಿಳಾ ಮತ್ತು ಲಿಂಗತ್ವ ಅಲ್ಪ ಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ ೮ ಕೊನೆಯ ದಿನವಾಗಿರುತ್ತದೆ. ಆಸಕ್ತ ಬೆಳಗಾವಿ ಗ್ರಾಮೀಣ ಪ್ರದೇಶದ ಅರ್ಹ ಮಹಿಳಾ ಮತ್ತು ಲಿಂಗತ್ವ ಅಲ್ಪ ಸಂಖ್ಯಾತರು ಅರ್ಜಿಗಳನ್ನು ವೆಬಸೈಟ್ ಮೂಲಕ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಸುವರ್ಣ ವಿಧಾನ ಸೌಧ ಬಿ-೪, ಬಿ-೫, ನೆಲಮಹಡಿ ಬೆಳಗಾವಿ ಇಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಬೆಳಗಾವಿ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


ಬೆಳಗಾವಿ ಜಿಲ್ಲಾ ವ್ಯಾಪ್ತಿ


ಬೆಳಗಾವಿ ಜಿಲ್ಲಾ ವ್ಯಾಪ್ತಿಯಲ್ಲಿ ೧೩ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಆಯ್ಕೆಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.
ಆಸಕ್ತ ಆಭ್ಯರ್ಥಿಗಳು ಆಗಷ್ಟ್ ೪ ರೊಳಗಾಗಿ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಶಿಶು ಅಭಿವೃದ್ಧಿ ಯೋಜನಾ ಕಚೇರಿಗಳನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button