Kannada NewsKarnataka NewsUncategorized

ವಿವಿಧ ತರಬೇತಿಗೆ ಅರ್ಜಿ ಆಹ್ವಾನ

“ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್” ಸಹಕಾರ ತರಬೇತಿಗೆ ಅರ್ಜಿ ಆಹ್ವಾನ


ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿಯ ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್, ಸಹಕಾರ ತರಬೇತಿ ಸಂಸ್ಥೆಯು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಇದರ ಅಂಗ ಸಂಸ್ಥೆಯಾಗಿದ್ದು ಸಹಕಾರ ಸಂಘಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ, ಸಹಕಾರ ಇಲಾಖೆ ಮತ್ತು ಸಹಕಾರ ಸಂಘಗಳ ಲೆಕ್ಕಪರಿಶೋಧನೆ ಇಲಾಖೆ ಸಿಬ್ಬಂದಿಗಳಿಗೆ ಹಾಗೂ ಖಾಸಗಿ ಅಭ್ಯರ್ಥಿಗಳಿಗೆ ೬ ತಿಂಗಳು / ೧೮೦ ದಿನಗಳ “ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್” ಸಹಕಾರ ತರಬೇತಿಯನ್ನು ನಿಡಲಾಗುತ್ತಿದೆ.
ಸದರಿ ತರಬೇತಿಯಲ್ಲಿ ಸಹಕಾರ, ಸಹಕಾರ ಪತ್ತು ಮತ್ತು ಬ್ಯಾಂಕಿಂಗ್, ಸಹಕಾರ ಸಂಘಗಳ ನಿರ್ವಹಣೆ, ಲೆಕ್ಕಶಾಸ್ತ್ರ ಮತ್ತು ಲೆಕ್ಕಪರಿಶೋಧನೆ ಹಾಗೂ ಸಹಕಾರ ಕಾಯಿದೆ ಅಂಶಗಳು, ಕಂಪ್ಯೂಟರ ಅಪರೇಷನ್ ಎಂಬ ವಿಷಯಗಳ ಬೋಧನೆ ಮಾಡಲಾಗುತ್ತದೆ. ಸಹಕಾರ ಕ್ಷೇತ್ರವನ್ನು ಬಲಪಡಿಸಲು ಅನೇಕ ತರಬೇತಿಗಳನ್ನು ನೀಡುತ್ತಿದ್ದು, ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಪಾಸಾಗಿರುವ ಜಿಲ್ಲೆಯ ಸಹಕಾರ ಸಂಘ-ಸಂಸ್ಥೆಗಳಿಂದ ಮತ್ತು ಖಾಸಗಿ ಅಭ್ಯರ್ಥಿಗಳಿಂದ ತರಬೇತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅನುತೀರ್ಣರಾಗಿ ಸಹಕಾರ ಸಂಘ-ಸಂಸ್ಥೆಗಳಲ್ಲಿ ಕನಿಷ್ಠ ಒಂದು ವರ್ಷಕ್ಕಿಂತ ಮೇಲ್ಪಟ್ಟು ಕೆಲಸ ನಿರ್ವಹಿಸಿರುವ ಸಿಬ್ಬಂದಿಗಳು ಸಹ ತರಬೇತಿಯನ್ನು ಪಡೆಯಲೂ ಅರ್ಹರಾಗಿರುತ್ತಾರೆ. ಈ ಅವಧಿಯಲ್ಲಿ ರೂ.೫೦೦ ಶಿಷ್ಯವೇತನವನ್ನು ನೀಡಲಾಗುವುದು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಸಹಕಾರ ಸಂಘಗಳ ಉಪನಿಬಂಧಕರು ಹಾಗೂ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಮೂಲಕ ಅರ್ಜಿ ಹಾಕಿದಲ್ಲಿ ಅಂತಹ ಅಭ್ಯರ್ಥಿಗಳಿಗೆ ರೂ.೬೦೦ ಶಿಷ್ಯವೇತನ ನೀಡಲಾಗುವುದು. (ವಯೋಮಿತಿ ೧೬ ರಿಂದ ಗರಿಷ್ಟ ೩೦ ವರ್ಷಗಳು ಮೀರಿರಬಾರದು)
ಆಸಕ್ತ ಅಭ್ಯರ್ಥಿಗಳು ಮೇಲಿನ ವಿಳಾಸಕ್ಕೆ ಖುದ್ದಾಗಿ ಬೇಟಿ ನೀಡಿ ಅರ್ಜಿ ಪಡೆಯಬಹುದು ಅಥವಾ ಸಮೀಪದ ಜಿಲ್ಲಾ ಸಹಕಾರಿ ಒಕ್ಕೂಟಗಳಲ್ಲಿ ಆರ್ಜಿಗಳನ್ನು ಪಡಯಬಹುದು. ತರಬೇತಿಯು ಜುಲೈ.೦೧ ೨೦೨೩ ರಿಂದ ಪ್ರಾರಂಭವಾಗಲಿದ್ದು, ಜೂನ.೩೦ ೨೦೨೩ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್, ಬೆಳಗಾವಿ. ದೂರವಾಣಿ:೦೮೩೧-೨೯೫೦೦೨೬, ಮೊ: ೯೪೪೯೦೦೭೬೬೧, ೮೦೫೦೫೩೩೨೦೭, ೮೮೪೨೫೯೫೪೫ ಗೆ ಸಂಪರ್ಕಿಸಬಹುದು ಎಂದು ಪ್ರಾಂಶುಪಾಲರಾದ ಶೈಲಾ.ಬಿ.ವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿಯ ಪ್ರವೇಶಾತಿಗೆ ಅರ್ಜಿ ಆಹ್ವಾನ

ರೆಗ್ಯೂಲರ್ (ಡಿ.ಸಿ.ಎಂ) ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ೬ ತಿಂಗಳ/೧೮೦ ದಿನಗಳ ಅವಧಿಯ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಬೆಳಗಾವಿಯ ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್‌ಯಿಂದ ಅರ್ಜಿ ಆಹ್ವಾನಿಸಲಾಗಿದೆ. ಸಹಕಾರ ಸಂಘ-ಸಂಸ್ಥೆ/ಸಹಕಾರ ಇಲಾಖೆ/ಸಹಕಾರ ಲೆಕ್ಕಪರಿಶೋಧನಾ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು ಮತ್ತು ಖಾಸಗಿ ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಬಹುದು.
ವಯೋಮಿತಿ ೧೬ ವರ್ಷ ದಾಟಿದವರಾಗಿರಬೇಕು. ಕನಿಷ್ಠ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀಣರಾಗಿರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ: ೬೦೦ ಶಿಷ್ಯವೇತನ ಹಾಗೂ ವಿಶೇಷ ಡಿ.ಸಿ.ಎಂ.ತರಬೇತಿ ನೀಡಲಾಗುವುದು.
ಇತರೆ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ ೫೦೦ ಶಿಷ್ಯವೇತನ ನೀಡಲಾಗುವುದು. ಪುರುಷ ಅಭ್ಯರ್ಥಿಗಳಿಗೆ ವಸತಿ ಸೌಲಭ್ಯ ಉಚಿತವಾಗಿರುತ್ತದೆ ಡಿ.ಸಿ.ಎಂ.ಕೋರ್ಸ ಮುಗುಸಿದ ನಂತರ ಸಹಕಾರ ಸಂಘ/ ಸಹಕಾರ ಬ್ಯಾಂಕ್‌ಗಳ ನೇಮಕಾತಿಲ್ಲಿ ಆಧ್ಯತೆ ನೀಡಲಾಗುತ್ತದೆ.
ಅರ್ಜಿ ಫಾರಂ ಮತ್ತು ವಿವರಣಾ ಪುಸ್ತಕಗಳನ್ನು ತರಬೇತಿ ಸಂಸ್ಥೆಯಿಂದ ಮತ್ತು ತರಬೇತಿ ಸಂಸ್ಥೆಯ ಕಾರ್ಯ ವ್ಯಾಪ್ತಿಯಲ್ಲಿ ಬರುವ ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲಾ ಸಹಕಾರಿ ಯೂನಿಯನ್‌ಗಳಿಂದ ಪಡೆಯಬಹುದು.
ಅರ್ಜಿ ಸಲ್ಲಿಸಲು ಮೇ.೩೦ ೨೦೨೩ ಕೊನೆಯ ದಿನವಾಗಿರುತ್ತದೆ .ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು ಕೆ.ಐ.ಸಿ.ಎಂ., ರಾಮತೀರ್ಥನಗರ, ಬೆಳಗಾವಿ ಹಾಗೂ ದೂರವಾಣಿ ಸಂಖ್ಯೆ: ೦೮೩೧-೨೯೫೦೦೨೬, ಮೊ:-೯೪೪೯೦೦೭೬೬೧, ೮೮೮೪೨೫೯೫೪೫, ೮೦೫೦೫೩೩೨೦೭ ಗೆ ಸಂಪರ್ಕಿಸಬಹುದು ಎಂದು ಪ್ರಾಂಶುಪಾಲರಾದ ಶೈಲಾ.ಬಿ.ವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



ದೂರ ಶಿಕ್ಷಣ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿಯ ಪ್ರವೇಶಾತಿಗೆ ಅರ್ಜಿ ಆಹ್ವಾನ
ಆನ್‌ಲೈನ್ ಪ್ರವೇಶ

ಬೆಳಗಾವಿ ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್‌ನಲ್ಲಿ ೬ ತಿಂಗಳ/೧೮೦ ದಿನಗಳ ಅವಧಿಯ ದೂರ ಶಿಕ್ಷಣ (ಡಿ.ಸಿ.ಎಂ) ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಈ ತರಬೇತಿಗೆ ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಯ ವಿವಿಧ ಸಹಕಾರ ಸಂಘ-ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು ಮಾತ್ರ ಅರ್ಜಿ ಸಲ್ಲಿಸಬಹುದು. ಇದು ದೂರ ಶಿಕ್ಷಣ ತರಬೇತಿ ಆಗಿದ್ದು ಸಹಕಾರ ಸಂಘಗಳ ಸಿಬ್ಬಂದಿಗಳು ಪದೋನ್ನತಿ ಹೊಂದಲು ಕಡ್ಡಾಯವಾಗಿರುತ್ತದೆ.
ಸಹಕಾರ ಸಂಘ ಸಂಸ್ಥೆಗಳಲ್ಲಿ ಒಂದು ವರ್ಷ ಸೇವೆ ಸಲ್ಲಿಸಿದ ಸಿಬ್ಬಂದಿಗಳು ತರಬೇತಿ ಪಡೆಯಲು ಅರ್ಹರಾಗಿರುತ್ತಾರೆ. ಮೇ.೦೨ ೨೦೨೩ ರಿಂದ ಅರ್ಜಿಯನ್ನು ಖುದ್ದಾಗಿ/ಆನ್‌ಲೈನ್ ಮೂಲಕ ಪಡೆದು ಸಲ್ಲಿಸಬಹುದು. ಜೂನ.೩೦ ೨೦೨೩ ಕೊನೆಯ ದಿನಾಂಕವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು ಕೆ.ಐ.ಸಿ.ಎಂ.ರಾಮತೀರ್ಥನಗರ, ಬೆಳಗಾವಿ ಇವರನ್ನು ಹಾಗೂ ದೂರವಾಣಿ ಸಂಖ್ಯೆ: ೦೮೩೧-೨೯೫೦೦೨೬, ಮೊ: ೯೪೪೯೦೦೭೬೬೧, ೮೮೮೪೨೫೯೫೪೫, ೮೦೫೦೫೩೩೨೦೭, ಗೆ ಅಥವಾ ಆನ್ ಲೈನ್ ಲಿಂಕ್ ತಿತಿತಿ.ಞsಛಿಜಿಜಛಿm.ಛಿo.iಟಿ ಸಂಪರ್ಕಿಸಬಹುದು ಎಂದು ಪ್ರಾಂಶುಪಾಲರಾದ ಶೈಲಾ.ಬಿ.ವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


https://pragati.taskdun.com/lkgadmission4-yearseducation-department/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button