Belagavi NewsBelgaum NewsKannada NewsKarnataka NewsLatest

*ವಸತಿ ರಹಿತರಿಗೆ ಮನೆ ನಿರ್ಮಾಣಕ್ಕೆ ಅರ್ಜಿ ಆಹ್ವಾನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: 2026-27 ನೇ ಸಾಲಿನಲ್ಲಿ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಲೆಮಾರಿ ಸಮುದಾಯದ ವಸತಿ ರಹಿತರಿಗೆ ವಸತಿ ಯೋಜನೆಯಡಿ ಮನೆ ನಿರ್ಮಾಣ ಮಾಡಿಕೊಳ್ಳಲು ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿದಾರರು ನಿಗಧಿತ ಅರ್ಜಿ ನಮೂನೆಗಳನ್ನು ಜಂಟಿ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ, ನೆಹರು ನಗರ ಬೆಳಗಾವಿ ಹಾಗೂ ಸಂಬಂಧಿಸಿದ ತಾಲ್ಲೂಕುಗಳ ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆಯವರಿಂದ ಕಚೇರಿ ನಡೆಯುವ ವೇಳೆಯಲ್ಲಿ ಪಡೆದು ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಸಂಬಂಧಿಸಿದ ತಾಲ್ಲೂಕುಗಳ ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಇವರಿಗೆ ಜುಲೈ 31, 2026 ರ ಸಂಜೆ 5, ಗಂಟೆಯೊಳಗಾಗಿ ಸಲ್ಲಿಸಬಹುದಾಗಿದೆ.

ಫಲಾನುಭವಿಗಳು ಸಲ್ಲಿಸಬೇಕಾದ ದಾಖಲಾತಿಗಳು

ನಿವೇಶನ ಹೊಂದಿರುವ ಬಗ್ಗೆ ಹಕ್ಕುಪತ್ರ / ಪೂರಕ ದಾಖಲಾತಿ ಪ್ರತಿ, ಪಾಸಪೋರ್ಟ ಅಳತೆಯ ಭಾವಚಿತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ, ಆಧಾರ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ ಪಾಸ್‌ಬುಕ್ ಪ್ರತಿ.

ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ / ತಾಲ್ಲೂಕು ಮಟ್ಟದ ಜಂಟಿ ನಿರ್ದೇಶಕರು ಹಾಗೂ ಸಹಾಯಕ ನಿರ್ದೇಶಕರ ಕಚೇರಿಗೆ ಕಚೇರಿ ಸಮಯದಲ್ಲಿ ಸಂರ್ಪಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button