*ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಹಲವು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಯುಜಿಡಿ (UGD) ಹೆಲ್ಪರ್ಗಳ ಬಾಕಿ ಉಳಿದಿರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸರ್ಕಾರದಿಂದ ಮಂಜೂರಾದ ಹುದ್ದೆಗಳ ಪೈಕಿ ಇತರೆ ವರ್ಗದ 13 ಹುದ್ದೆಗಳು, ಪರಿಶಿಷ್ಟ ಜಾತಿ (ಎ) ಪ್ರವರ್ಗದ ಒಂದು ಹುದ್ದೆ ಹಾಗೂ ಪರಿಶಿಷ್ಟ ಪಂಗಡದ ಎರಡು ಹುದ್ದೆಗಳು ಅರ್ಹ ಅಭ್ಯರ್ಥಿಗಳ ಅಲಭ್ಯತೆಯಿಂದ ಬಾಕಿ ಉಳಿದಿವೆ.
ಪ್ರಸ್ತುತ ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳನ್ವಯ ಈ ಹುದ್ದೆಗಳನ್ನು ಭರ್ತಿ ಮಾಡಲು ಮಹಾನಗರ ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ನಮೂನೆಗಳನ್ನು ನವೆಂಬರ್ 25ರಿಂದ ಡಿಸೆಂಬರ್ 9ರವರೆಗೆ ಮಹಾನಗರ ಪಾಲಿಕೆಯ ಆಡಳಿತ ಶಾಖೆಯಲ್ಲಿ ಅಥವಾ ಪಾಲಿಕೆಯ ಅಧಿಕೃತ ವೆಬ್ಸೈಟ್ www.belagavicity.mrc.gov.in ಮೂಲಕ ಪಡೆಯಬಹುದು.
ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 9ರ ಸಂಜೆ 5.30 ಗಂಟೆಯೊಳಗೆ ಮಹಾನಗರ ಪಾಲಿಕೆಯ ಕಚೇರಿಗೆ ಸಲ್ಲಿಸಬೇಕು.
ಈ ಕುರಿತು ಹೆಚ್ಚಿನ ಮಾಹಿತಿಯನ್ನು ಪಾಲಿಕೆಯ ಅಧಿಕೃತ ವೆಬ್ಸೈಟ್ ಹಾಗೂ ಮುಖ್ಯ ಕಚೇರಿಯ ಸೂಚನಾ ಫಲಕದಲ್ಲಿ ವೀಕ್ಷಿಸಬಹುದು ಎಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




