Belagavi NewsBelgaum NewsEducationKannada NewsKarnataka News
*ವಸತಿ ಕಾಲೇಜುಗಳಲ್ಲಿ ಪ್ರಥಮ ಪಿಯುಸಿ ಪ್ರವೇಶಕ್ಕೆ ಅರ್ಜಿ ಅಹ್ವಾನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: 2026-27ನೇ ಸಾಲಿಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವತಿಯಿಂದ ನಡೆಸಲಾಗುತ್ತಿರುವ ಮೊರಾರ್ಜಿ ದೇಸಾಯಿ/ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ/ಕಾಲೇಜುಗಳ ಪ್ರಥಮ ಪಿಯುಸಿ ದಾಖಲಾತಿಗಾಗಿ ಪ್ರಸ್ತುತ 10ನೇ ತರಗತಿ ವಾರ್ಷಿಕ ಪರೀಕ್ಷೆ ಪಾಸಾದ ವಿದ್ಯಾರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಏಪ್ರಿಲ್ 29 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, https://kreis.karnataka.gov.in ಈ ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಸರ್ಕಾರಿ ಶಾಲೆಗಳು ಮತ್ತು ಸರ್ಕಾರಿ ಅನುದಾನಿತ ಶಾಲೆಗಳ ವಿದ್ಯಾರ್ಥಿಗಳನ್ನು ಒಟ್ಟಾರೆಯಾಗಿ ಪರಿಗಣಿಸಿ, ಪ್ರವೇಶಾವಕಾಶವನ್ನು ಕಲ್ಪಿಸಲಾಗುತ್ತದೆ ಎಂದು ಬೆಳಗಾವಿ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




