Belagavi NewsBelgaum NewsKannada NewsKarnataka NewsNational

*ವಸತಿ ಶಾಲೆ/ ಕಾಲೇಜುಗಳ ಪ್ರಥಮ ಪಿಯುಸಿ ದಾಖಲಾತಿಗಾಗಿ ಅರ್ಜಿ ಆಹ್ವಾನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: 2025-26ನೇ ಸಾಲಿನ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವಸತಿಯಿಂದ ಬೆಳಗಾವಿ ಜಿಲ್ಲೆಯಲ್ಲಿ ನಡೆಸಲಾಗುತ್ತಿರುವ ಮೊರಾರ್ಜಿ ದೇಸಾಯಿ /ಅಟಲ ಬಿಹಾರಿ ವಾಜಪೇಯಿ ವಸತಿ ಶಾಲೆ/ಕಾಲೇಜುಗಳ ಪ್ರಥಮ ಪಿಯುಸಿ ದಾಖಲಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿಲಾಗಿದೆ.

ಪ್ರಸ್ತುತ 10ನೇ ತರಗತಿ ವಾರ್ಷಿಕ ಪರೀಕ್ಷೆ ಪಾಸಾದ ವಿದ್ಯಾರ್ಥಿಗಳು ಹತ್ತಿರದ ಕ್ರೈಸ್ ವಸತಿ ಶಾಲೆ/ಕಾಲೇಜಿನಲ್ಲಿ ಅರ್ಜಿ ನಮೂನೆ ಪಡೆದು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಮೇ 10, 2025ರೊಳಗಾಗಿ ಅರ್ಜಿ ಸಲ್ಲಿಸಬಹುದು. ದಾಖಲಾತಿ ಪಡೆದ ವಿದ್ಯಾರ್ಥಿಗಳಿಗೆ ಉಚಿತ ಊಟ, ವಸತಿ ಹಾಗೂ ಇತರೆ ಸೌಲಭ್ಯ ನೀಡಲಾಗುವದು.

Home add -Advt

ಹೆಚ್ಚಿನ ಮಾಹಿತಿಗಾಗಿ ಹತ್ತಿರದ ವಸತಿ ಶಾಲೆ/ ಕಾಲೇಜುಗಳಲ್ಲಿ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ರಾಮನಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Back to top button