Kannada NewsKarnataka NewsNationalPolitics

*ಯುವನಿಧಿ ಯೋಜನೆಗೆ ಅರ್ಜಿ ಆಹ್ವಾನ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವ ನಿಧಿ ಯೋಜನೆಯ ಪ್ರಕ್ರಿಯೆ ಆರಂಭವಾಗಿದೆ. ಅರ್ಹ ಅಭ್ಯರ್ಥಿಗಳು ಯುವನಿಧಿ ಯೋಜನೆಗೆ ನೋಂದಾಯಿಸಿಕೊಳ್ಳಬಹುದಾಗಿದೆ.

2024-25ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡಿ 2025ರಲ್ಲಿ ಪದವಿ/ಸ್ನಾತಕೋತ್ತರ ಪದವಿ/ಡಿಪ್ಲೋಮಾ ಉತ್ತೀರ್ಣರಾಗಿರಬೇಕು. ಫಲಿತಾಂಶ ಪ್ರಕಟವಾದ 180 ದಿನಗಳ ನಂರವೂ ಸರ್ಕಾರಿ ಅಥವಾ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿರದವರು ಹಾಗೂ ಸಯಂ ಉದ್ಯೋಗ ಮಾಡದಿರುವವರು ಸಹ ಇದಕ್ಕೆ ಅರ್ಜಿ ಸಲ್ಲಿಸಬಹುದು. ಕನಿಷ್ಠ 6 ವರ್ಷ ಕನಾರ್ಟಕದಲ್ಲಿ ವಾಸವಾಗಿರಬೇಕು. ಉನ್ನತ ವ್ಯಾಸಂಗವನ್ನ ಮಾಡದೇ ಇರುವವರು.

Home add -Advt

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು

ಕರ್ನಾಟಕ ನಿವಾಸಿ ಎಂದು ನಿರೂಪಿಸಲು ಸಲ್ಲಿಸಬೇಕಾದ ದಾಖಲೆ. ಎಸ್ಸೆಸ್ಸೆಲ್ಸಿ ಅಥವಾ ಪಿಯುಸಿ ಅಥವಾ ಪಡಿತರ ಚೀಟಿ ಸಂಖ್ಯೆ ಇದು ಪದವಿ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯ, ನೀವು ಡಿಪ್ಲೋಮಾ ಮಾಡಿದ್ದರೆ 8, 9ನೇ ತರಗತಿ ಮಾರ್ಕ್ಸ್ ಕಾರ್ಡ್ ನೀಡಬೇಕು. 

ಎಲ್ಲಿ ಅರ್ಜಿ ಸಲ್ಲಿಸಬಹುದು

ಈ ಯೋಜನೆಯ ಫಲ ಪಡೆಯಲು ಕರ್ನಾಟಕ ಒನ್, ಬಾಪೂಜಿ ಸೇವಾ ಕೇಂದ್ರಗಳು, ಗ್ರಾಮ ಒನ್ ಕೇಂದ್ರಗಳಲ್ಲೂ ಅರ್ಜಿ ಸಲ್ಲಿಸಬಹುದು. ಸೇವಾಸಿಂಧು ಪೋರ್ಟಲ್‌ನಲ್ಲಿ ಲಾಗಿನ್ ಮಾಡಿಕೊಂಡು ಯುವನಿಧಿ ಯೋಜನೆ ಸೇವೆ ಆಯೆ ಮಾಡಿಕೊಂಡು ಅರ್ಜಿ ಹಾಕಬಹುದು.

ಯುವನಿಧಿಯ ಜೊತೆಗೆ ಕೌಶಲ್ಯ ತರಬೇತಿ ಕಾರ್ಯಕ್ರಮವನ್ನ ಸಹ ಹಮ್ಮಿಕೊಂಡಿದ್ದು, ಆಸಕ್ತಿ ಇರುವ ಅಭ್ಯರ್ಥಿಗಳು ಕರ್ನಾಟಕ ಕೌಶಲ್ಯ ಅಭೀವೃದ್ಧಿ ನಿಗಮದ ವೆಬ್‌ಸೈಟ್ Karnataka Koushalya Mission ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

Related Articles

Back to top button