Belagavi NewsBelgaum NewsKannada NewsKarnataka NewsLatest

*ಬೆಳಗಾವಿ ಜಿಲ್ಲೆಯ 4 ತಾಲೂಕುಗಳ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಬೆಳಗಾವಿ ಜಿಲ್ಲೆಯ ಅಥಣಿ, ನಿಪ್ಪಾಣಿ, ಗೋಕಾಕ ಹಾಗೂ ರಾಯಬಾಗ ತಾಲೂಕುಗಳ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಹ ಸ್ಥಳೀಯ ಮಹಿಳಾ ಅಭ್ಯರ್ಥಿಗಳು ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರಿಂದ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅಥಣಿ ತಾಲೂಕಿನ ಅಂಗನವಾಡಿ ಕೇಂದ್ರಗಳಲ್ಲಿ ೩ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ೨೩ ಅಂಗನವಾಡಿ ಸಹಾಯಕಿಯರ ಹುದ್ದೆಗಳು ಖಾಲಿ ಇದ್ದು, ನಿಪ್ಪಾಣಿ ತಾಲೂಕಿನಲ್ಲಿಈ ೧೩ ಅಂಗನವಾಡಿ ಕಾರ್ಯಕರ್ತೆಯರ ಮತ್ತು ೫೩ ಅಂಗನವಾಡಿ ಸಹಾಯಕಿಯರ ಹುದ್ದೆಗಳು ಭರ್ತಿಗೆ ಪ್ರಕಟಣೆ ಹೊರಡಿಸಲಾಗಿದೆ.

Home add -Advt

ಇದೇ ರೀತಿ ಗೋಕಾಕ ತಾಲೂಕಿನ ಅಂಗನವಾಡಿ ಕೇಂದ್ರಗಳಲ್ಲಿ ೧೦ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ೧೭ ಅಂಗನವಾಡಿ ಸಹಾಯಕಿಯರ ಹುದ್ದೆಗಳು ಖಾಲಿ ಇದ್ದರೆ, ರಾಯಬಾಗ ತಾಲೂಕಿನಲ್ಲಿಈ ೧ ಅಂಗನವಾಡಿ ಕಾರ್ಯಕರ್ತೆ ಹಾಗೂ ೩೯ ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಸಂಬಂಧಪಟ್ಟ ಶಿಶು ಅಭಿವೃದ್ಧಿ ಯೋಜನಾ ಕಚೇರಿಯಿಂದ ಅರ್ಜಿ ನಮೂನೆಯನ್ನು ಪಡೆದುಕೊಂಡು, ಮೇ ೧೪, ೨೦೨೬ ರಿಂದ ಜೂನ್ ೧೬, ೨೦೨೬ರ ಸಂಜೆ ೫.೩೦ ಗಂಟೆಯೊಳಗೆ ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಬೇಕು.

ನಿಗದಿತ ದಿನಾಂಕ ಹಾಗೂ ಸಮಯದೊಳಗೆ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಂಬಂಧಪಟ್ಟ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ಕಚೇರಿಗೆ ಖುದ್ದಾಗಿ ಅಥವಾ ನೊಂದಾಯಿತ ಅಂಚೆ ಮೂಲಕ ತಲುಪುವಂತೆ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲೂಕುಗಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Related Articles

Back to top button