
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ/ ಕಾರವಾರ : ಕೋವಿಡ್-೧೯, ೨ನೇ ಅಲೆಯ ಪರಿಣಾಮದಿಂದಾಗಿ ಕಾರ್ಮಿಕರಿಗೆ ಆರ್ಥಿಕ ನಷ್ಟವಾಗಿರುವುದನ್ನು ಗಮನಿಸಿ ಕಾರ್ಮಿಕ ಇಲಾಖೆಯು ೧೧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಒಂದು ಬಾರಿ ೨ ಸಾವಿರ ರೂ ನೆರವು ನೀಡಲು ಅರ್ಜಿ ಆಹ್ವಾನಿಸಿದೆ.
ಅಗಸರು, ಕ್ಷೌರಿಕರು, ಗೃಹ ಕಾರ್ಮಿಕರು, ಟೈಲರ್‌ಗಳು, ಮೆಕ್ಯಾನಿಕ್, ಚಿಂದಿ ಆಯುವವರು, ಹಮಾಲರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು ಹಾಗೂ ಭಟ್ಟಿ ಕಾರ್ಮಿಕ ವೃತ್ತಿಯಲ್ಲಿ ತೊಡಗಿರುವ ೧೮-೬೫ ವಯೋಮಾನದ ಬಿ.ಪಿ.ಎಲ್ ಕುಟುಂಬದ ಓರ್ವ ಫಲಾನುಭವಿಯು ಮಾತ್ರ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸಬಯಸುವ ಫಲಾನುಭವಿ ಆಧಾರ್ ಸಂಖ್ಯೆ ಲಿಂಕ್ ಆಗಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ನಿಗದಿತ ವೃತ್ತಿ ನಿರ್ವಹಿಸುತ್ತಿರುವ ಕುರಿತು ಬಿ.ಪಿ.ಎಲ್ ವ್ಯಾಪ್ತಿಯ ವಾರ್ಡ್‌ಗಳ ಮಟ್ಟದಲ್ಲಿನ ಕಂದಾಯ ಅಧಿಕಾರಿ, ಕಂದಾಯ ನಿರೀಕ್ಷಕರು/ಹಿರಿಯ ಆರೋಗ್ಯ ಅಧಿಕಾರಿಗಳು/ಆರೋಗ್ಯ ನಿರೀಕ್ಷಕರು. ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಮಹಾನಗರ ಪಾಲಿಕೆ/ನಗರ ಸಭೆ, ಪುರ ಸಭೆ, ಪಟ್ಟಣ ಪಂಚಾಯತಿಯ ಕಂದಾಯ ಅಧಿಕಾರಿ/ಕಂದಾಯ ನಿರೀಕ್ಷಕರು. ತಾಲ್ಲೂಕು ಮಟ್ಟದಲ್ಲಿ ಕಂದಾಯ ಇಲಾಖೆಯ ತಹಶೀಲ್ದಾರರು, ಉಪ ತಹಶೀಲ್ದಾರರು, ಕಂದಾಯ ಅಧಿಕಾರಿಗಳು/ಕಂದಾಯ ನಿರೀಕ್ಷಕರು. ಕಾರ್ಮಿಕ ಇಲಾಖೆಯ ಸಹಾಯಕ ಕಾರ್ಮಿಕ ಆಯುಕ್ತರು/ಕಾರ್ಮಿಕ ಅಧಿಕಾರಿಗಳು, ಹಿರಿಯ ಕಾರ್ಮಿಕ ನಿರೀಕ್ಷಕರು/ಕಾರ್ಮಿಕ ನಿರೀಕ್ಷಕರು. ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ ಅಥವಾ ತಾವು ಕೆಲಸ ನಿರ್ವಹಿಸುತ್ತಿರುವ ಇಲಾಖೆ, ಮಂಡಳಿ/ನಿಗಮದ ಅಧಿಕೃತ ಅಧಿಕಾರಿಗಳಿಂದ ಪಡೆದ ಉದ್ಯೋಗ ದೃಢೀಕರಣ ಪ್ರಮಾಣ ಪತ್ರ ಹಾಗೂ ಇತ್ತೀಚಿನ ಭಾವ ಚಿತ್ರದೊಂದಿಗೆ https:sevasindhu.karnataka.gov.in ಪೋರ್ಟಲ್‌ನಲ್ಲಿ ಜೂನ್ ೩೧ ರೊಳಗೆ ಅರ್ಜಿ ಸಲ್ಲಿಸುವುದು.
ಅರ್ಜಿ ಸಲ್ಲಿಸಲು ಗ್ರಾಮ ಪಂಚಾಯತ ವ್ಯಾಪ್ತಿಯ ಸೇವಾ ಕೇಂದ್ರಗಳು, ವಾರ್ಡ್ ಮಟ್ಟದ ಸೇವಾ ಕೇಂದ್ರಗಳು, ಸಾಮಾನ್ಯ ಸೇವಾ ಕೆಂದ್ರಗಳು (CSC) ಕಾರ್ಮಿಕ ಸೇವಾ ಕೇಂದ್ರಗಳು ಅಥವಾ ಕಾರ್ಮಿಕ ನಿರೀಕ್ಷಕರು, ಕಾರ್ಮಿಕ ನಿರೀಕ್ಷಕರು, ಕಾರ್ಮಿಕ ಅಧಿಕಾರಿಗಳ ಕಛೇರಿಯನ್ನು ಭೇಟಿ ನೀಡಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಾರವಾರ ಜಿಲ್ಲೆಯವರು ಕಾರ್ಮಿಕ ಸಹಾಯವಾಣಿ ಸಂಖ್ಯೆ: ೧೫೫೨೧೪ ಅಥವಾ ಸೇವಾಸಿಂಧು ೮೦೮೮೩೦೪೮೫೫, ೬೩೬೧೭೯೯೭೯೬, ೯೩೮೦೨೦೪೩೬೪, ೯೩೮೦೨೦೬೭೦೪ ರಜಾದಿನಗಳಲ್ಲಿ ಹೊರತುಪಡಿಸಿ) ಸಂಪರ್ಕಿಸಬಹುದಾಗಿದೆ.
ಸಲ್ಲಿಸಿದ ಅರ್ಜಿಗಳನ್ನು ಪರಿಶೀಲಿಸಿ ಅರ್ಹ ಫಲಾನುಭವಿಗಳಿಗೆ ಆಧಾರ್ ಸಂಖ್ಯೆಗೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ಡಿ.ಬಿ.ಟಿ ಮೂಲಕ ಪರಿಹಾರವನ್ನು ನೇರವಾಗಿ ವರ್ಗಾಯಿಸಲಾಗುವುದು ಎಂದು ಕಾರ್ಮಿಕ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
https:sevasindhu.karnataka.gov.in
ಬೆಳಗಾವಿ ಟೈಲರ್ಸ್ ಗಮನಕ್ಕೆ
ಬೆಳಗಾವಿ ಜಿಲ್ಲೆಯಲ್ಲಿ ಸಹಾಯ ಧನ ಪಡೆಯಲು ಅರ್ಹ ಟೈಲರ್ಸ್ ಕೆಲಸ ಮಾಡುವ ಕೆಲಸಗಾರಿಗೆ ಸಿಗಬೇಕಾದ ಸಹಾಯ ಧನ ಸಿಗಲು ಮಾಹಿತಿ, ಸಹಕಾರ ಬೇಕಾದವರು, ವಿವರ, ಆಧಾರ ಕಾರ್ಡ್, ಬಿಪಿಎಲ್ ಕಾರ್ಡ್, ಬ್ಯಾಂಕ್ ಡಿಟೆಲ್ಸ್ ಮತ್ತು ಫೋಟೋ ಸಹಿತ ಸಂಪರ್ಕಿಸಬಹುದು.
ಸಂಪರ್ಕ ವಿಳಾಸಕೃಷ್ಣ ಭಟ್ (ಕರ್ನಾಟಕ ಸ್ಟೇಟ್ ಟೈಲರ್ಸ ಅಸೋಸಿಯೇಷನ್ ಸ್ಟೇಟ್ ಮೆಂಬರ್),ಕ್ರೀಸ್ ವೈಸ್ ಟೈಲರ್ಸ, ಬೆಳಗಾವಿ ಮೊಬೈಲ್ – 9742414201, 8050939864, 9844095193,8792715031.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ