Kannada NewsKarnataka NewsNationalPolitics

*13 ಉಪಾಧ್ಯಕ್ಷರು, 8 ಪ್ರಧಾನ ಕಾರ್ಯದರ್ಶಿಗಳ ನೇಮಕ: ರಾಜ್ಯದ ಇಬ್ಬರಿಗೆ ಸ್ಥಾನ*

ಬಿಜೆಪಿ ರಾಷ್ಟ್ರೀಯ ಘಟಕ ಪುನಾರಚನೆ

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ರಾಷ್ಟ್ರೀಯ ಘಟಕವನ್ನು ಪುನಾರಚನೆ ಮಾಡಲಾಗಿದೆ. ಸಂಘಟನೆ ಹಾಗೂ 2029ರ ಲೋಕಸಭೆಯ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು 13 ಜನ ಉಪಾಧ್ಯಕ್ಷರ ನೇಮಕ ಮಾಡಿ ಆದೇಶ ಹೋರಡಿಸಿದ್ದಾರೆ.

Home add -Advt

13 ರಾಷ್ಟ್ರೀಯ ಉಪಾಧ್ಯಕ್ಷರು, 8 ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಮತ್ತು 16 ಮೋರ್ಚಾಗಳ ಅಧ್ಯಕ್ಷರು ಸೇರಿದಂತೆ ಹಲವು ಪದಾಧಿಕಾರಿಗಳನ್ನು ನೇಮಕ ಮಾಡಿ ಆದೇಶಿಸಲಾಗಿದೆ.

ಇನ್ನು ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮಣೆಹಾಕಿರುವ ಬಿಜೆಪಿಯು ಪ್ರೊ.ಎಂ.ನಾಗರಾಜ್ ಅವರಿಗೆ ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಇದಲ್ಲದೇ ಬಿ.ಎಲ್ ಸಂತೋಷ್ ಅವರಿಗೆ ಸಂಘಟನಾತ್ಮಕ ಜವಾಬ್ದಾರಿಯನ್ನು ವಹಿಸಲಾಗಿದೆ.

ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆ ಮತ್ತು ಹಿರಿಯ ನಾಯಕ ರಾಮ್ ಮಾಧವ್ ಅವರನ್ನು ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೆ ಸಂಘಟನೆಯಲ್ಲಿ ಪ್ರಮುಖ ಜವಾಬ್ದಾರಿ ನೀಡಲಾಗಿದ್ದು, ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ.

ನಿತಿನ್ ನಬಿನ್ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಕೈಗೊಂಡಿರುವ ಈ ಪ್ರಮುಖ ಪುನರ್‌ರಚನೆಯು, ರಾಷ್ಟ್ರಮಟ್ಟದಲ್ಲಿ ಪಕ್ಷಕ್ಕೆ ಹೊಸ ಸಂಘಟನಾತ್ಮಕ ಶಕ್ತಿಯನ್ನು ತುಂಬುವ ಲೆಕ್ಕಾಚಾರವಿದೆ.

Related Articles

Back to top button